
CHITRADURGA NEWS | 21 DECEMBER 2025
ಚಿತ್ರದುರ್ಗ: ನಗರದ ಕೋಟೆ ಆವರಣದ ಕೋಟೆ ಆಂಜನೇಯ ಸ್ವಾಮಿಯ 54 ನೇ ವರ್ಷದ ಕಾರ್ತೀಕ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.
ಇದನ್ನೂ ಓದಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ | ಅರ್ಥಪೂರ್ಣ, ವಿಜೃಂಭಣೆ ಆಚರಣೆ | AC

ಕಾರ್ತಿಕೋತ್ಸವದ ಅಂಗವಾಗಿ ಸ್ವಾಮಿಯ ಮೂರ್ತಿಗೆ ಶಾಸ್ತ್ರೋಕ್ತವಾಗಿ ಅಭಿಷೇಕ ಸೇರಿ ಇನ್ನಿತರೆ ಪೂಜಾ ಕೈಂಕರ್ಯ ಸೇವೆ ನೆರವೇರಿಸಲಾಯಿತು. ದೇಗುಲದಲ್ಲಿನ ಗಣಪತಿ, ನಾಗಪ್ಪ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ಸಂಜೆ ನಡೆದ ದೀಪೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಭಕ್ತರು ದೇಗುಲ ಮುಂಭಾಗ ಶ್ರದ್ಧಾ-ಭಕ್ತಿಯಿಂದ ದೀಪಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಇದನ್ನೂ ಓದಿ: ಕಣ್ಮನ ಸೆಳೆದ ಮಕ್ಕಳ ಸಂತೆ | ಬೀದಿಯಲ್ಲಿ ಕುಳಿತು ತರಕಾರಿ ಮಾರಿ ಲೆಕ್ಕ ಕಲಿತ ಪೋರರು
ಮಹಾಮಂಗಳಾರತಿ, ತೀರ್ಥ, ಪ್ರಸಾದ ವಿತರಿಸಲಾಯಿತು. ನವ ಭಾರತ ಯುವಕರ ಸಂಘ ಭಕ್ತರ ಸಹಕಾರದೊಂದಿಗೆ ಭಾನುವಾರ ದೇವಸ್ಥಾನದ ಆವರಣದಲ್ಲಿ ಅನ್ನ ಸಂರ್ತಪಣೆ ನೆರವೇರಿಸಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
