ಮುಖ್ಯ ಸುದ್ದಿ
ವಿರೋಧ ಮಾಡಿದವರು ಕಾಂಗ್ರೆಸ್ ಕಾರ್ಯಕರ್ತರಲ್ಲ| ಬಿ.ಎನ್.ಚಂದ್ರಪ್ಪ

ಚಿತ್ರದುರ್ಗ ನ್ಯೂಸ್. ಕಾಂ: ಸಚಿವರಾದ ಮಹಾದೇವಪ್ಪ ಲೋಕಸಭೆ ಕ್ಷೇತ್ರದ ವೀಕ್ಷಕರಾಗಿ ಬಂದಿದ್ದಾಗ ಹೊರಗಿನವರು ಎಂದು ನನಗೆನ ನಮ್ಮ ಪಕ್ಷದ ಯಾವ ಕಾರ್ಯಕರ್ತರು ವಿರೋಧ ಮಾಡಿಲ್ಲ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಹೇಳಿದರು.
ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಹೀಗೆ ಪ್ರತಿಕ್ರಿಯಿಸಿದರು.
ಹೊರಗಿನವರಿಗೆ ಟಿಕೇಟ್ ಕೊಡಬಾರದು ಎಂದು ನಿಮ್ಮ ಪಕ್ಷದಲ್ಲಿ ವಿರೋಧ ಇದೆಯಲ್ಲಾ ಎನ್ನುವ ಮಾತಿಗೆ, ಅಲ್ಲಿ ಗಲಾಟೆ ಮಾಡಿದವರಲ್ಲಿ ನಮ್ಮ ಕಾರ್ಯಕರ್ತರು ಇರಲಿಲ್ಲ ಎಂದರು.

ಮೊಳಕಾಲ್ಮೂರು ತಾಲುಕಿಗೆ ಶ್ರೀರಾಮಲು ಬಂದಾಗ ಎಷ್ಟು ಗಲಾಟೆ ಆಗಿತ್ತು, ಪೊರಕೆ ಹಿಡಿದು ಪ್ರತಿಭಟಿಸಿದ್ದರು. ಕೊನೆಗೆ 40 ಸಾವಿರ ಮತಗಳ ಅಂತರದಿಂದ ಗೆಲ್ಲಲಿಲ್ಲವೇ ಎಂದರು.
ಲೋಕಸಭೆ ಚುನಾವಣೆಗೆ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. ಇಲ್ಲಿ ಯಾರು ಅಭ್ಯರ್ಥಿ ಎನ್ನುವುದಕ್ಕಿಂತ ಪಕ್ಷ ಗೆಲ್ಲಬೇಕು. ಕಾಂಗ್ರೆಸ್ ಕೇಂದ್ರದಲ್ಲೂ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರಗಳಲ್ಲಿ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಹೀಗಾಗಿ ಇಲ್ಲಿ ಪಕ್ಷ ಗೆಲ್ಲುವ ಭರವಸೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್, ತಾಲೂಕು ಅಧ್ಯಕ್ಷ ಲಕ್ಷ್ಮೀಕಾಂತ್, ಪ್ರಕಾಶ್, ಎನ್.ಡಿ.ಕುಮಾರ್ ಮತ್ತಿತರರಿದ್ದರು.
