ಮುಖ್ಯ ಸುದ್ದಿ
ಕೆಎಸ್‌ಸಿಎ ಕ್ರಿಕೆಟ್ ಆಯ್ಕೆ ಟ್ರಯಲ್ಸ್ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್ ಮೈದಾನ
CHITRADURGA NEWS | 28 JUNE 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) 19 ವರ್ಷದೊಳಗಿನವರ ತುಮಕೂರು ವಲಯದ ಜಿಲ್ಲಾ ಕ್ರಿಕೆಟ್ ತಂಡಗಳ ಆಯ್ಕೆಗೆ ಜೂನ್ 30ರಂದು ಚಿತ್ರದುರ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ತುಮಕೂರಿನಲ್ಲಿ ಆಯ್ಕೆ ಟ್ರಯಲ್ಸ್ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದಲ್ಲಿರುವ ಚಿತ್ರದುರ್ಗ ಕ್ರಿಕೆಟ್ ಕ್ಲಬ್ (ಸಿಸಿಎ) ಟರ್ಫ್ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟಗೆ ಟ್ರಯಲ್ಸ್ ಜರುಗಲಿದೆ.
ಕ್ಲಿಕ್ ಮಾಡಿ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ
‘ಪ್ರೈಮರಿ ಜೋನ್’ನ ಆಟಗಾರರು ಮಾತ್ರ ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ಆಟಗಾರರು 2005ರ ಸೆಪ್ಟೆಂಬರ್ 1ರ ನಂತರ ಜನಿಸಿದವರಾಗಿರಬೇಕು. 16 ವರ್ಷದೊಳಗಿನವರಿಗೆ ಭಾಗವಹಿಸಲು ಅವಕಾಶ ಇಲ್ಲ.
ಕ್ಲಿಕ್ ಮಾಡಿ ಓದಿ: ಲಾರ್ವಾ ಸಮೀಕ್ಷೆಗೆ ಸ್ವಯಂಸೇವಕರ ಆಯ್ಕೆಗೆ ಅರ್ಜಿ ಆಹ್ವಾನ
ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳುವವರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ಮೂಲ ಪ್ರತಿ ಹಾಗೂ ಜೆರಾಕ್ಸ್ ಪ್ರತಿಯೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಸಂಬಂಧಪಟ್ಟ ಕಾಲೇಜುಗಳ ಮುಖ್ಯಸ್ಥರಿಂದ ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಡಿಜಿ ಲಾಕರ್‌ನಿಂದ ಡೌನ್‌ಲೋಡ್ ಮಾಡಿದ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸಿಸಿಎ ಕಾರ್ಯದರ್ಶಿ ಎನ್.ಅಶೋಕ್ , ದೂರವಾಣಿ ಸಂಖ್ಯೆ 9741738564 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.