CHITRADURGA NEWS | 30 SEPTEMBER 2024
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಗುಂಡಿಗೆ ಉರುಳಿ ಬಿದ್ದ ಘಟನೆ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ 9 ಗಂಟೆ ವೇಳೆಗೆ ಓಬಳಾಪುರ ತಾಂಡದ ಕಡೆಯಿಂದ ಜವನಗೊಂಡನಹಳ್ಳಿ ಕಡೆ ಬಸ್ ಬರುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಆಕಾಶದಲ್ಲಿ ವಿಸ್ಮಯ | ಬರಿಗಣ್ಣಿಗೆ ಗೋಚರಿಸಲಿದೆ ಅಟ್ಲಾಸ್ ಧೂಮಕೇತು

ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಶಾಲಾ ವಿದ್ಯಾರ್ಥಿಗಳನ್ನ ಸ್ಥಳೀಯರು ರಕ್ಷಣೆ ಮಾಡಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
