
CHITRADURGA NEWS | 31 JULY 2025
ಚಿತ್ರದುರ್ಗ: ಹೂ ಮಾರಾಟ ಮಾಡಲು ಚಿತ್ರದುರ್ಗಕ್ಕೆ ಬಂದು ವಾಪಾಸು ತನ್ನ ಗ್ರಾಮಕ್ಕೆ ತೆರಳುತ್ತಿದ್ದ ರೈತ ಯುವಕ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನಲ್ಲಿ ನಡೆದಿದೆ.
ಜುಲೈ 30 ಬುಧವಾರ ಸಂಜೆ ಚಿತ್ರದುರ್ಗದಿಂದ ಹೂವು ಮಾರಿ ತನ್ನ ಊರಿಗೆ ಹೋಗುತ್ತಿದ್ದ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ಕೋಟಿ(26) ಚಲಾಯಿಸುತ್ತಿದ್ದ ಬೈಕಿಗೆ ಬಸ್ ಡಿಕ್ಕಿಯಾಗಿ ಸ್ಥಲದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಳೆ ವಿಮೆ | ಅಡಿಕೆ, ದಾಳಿಂಬೆ, ಮಾವು ಬೆಳೆ ನೊಂದಣಿಗೆ ಆಗಸ್ಟ್ 11 ಕೊನೆ ದಿನ
ನಾಯಕನಹಟ್ಟಿಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೋನೂರು ಬಳಿ ಬೈಕಿಗೆ ಡಿಕ್ಕಿಯಾಗಿದೆ.
ಘಟನಾ ಸ್ಥಳಕ್ಕೆ ತುರುವನೂರು ಪೊಲೀಸರು ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
