
CHITRADURGA NEWS | 15 OCTOBER 2025
ಹೊಸದುರ್ಗ: ಬೈಕಿಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ಹೊಸದುರ್ಗ ಪಟ್ಟಣದ ಎಸ್.ಜೆ.ಎಮ್. ಕಾಂಪ್ಲೆಕ್ಸ್ ಮುಂಭಾಗ ಬುಧವಾರ ಮಧ್ಯಾಹ್ನ ನೆಡೆದಿದೆ.
ಇದನ್ನೂ ಓದಿ:ಕಚೇರಿಯಲ್ಲೇ ನೀರಿನ ಕ್ಯಾನ್ ಗೆ ಮದ್ಯ ಮಿಕ್ಸ್ | ಡಿಡಿಪಿಐ ಕಚೇರಿ ಸಿಬ್ಬಂದಿ ಅಮಾನತು
ಮೃತ ರಂಗಸ್ವಾಮಿ (38) ಹೊಸದುರ್ಗ ಪಟ್ಟಣದ ವಿನಾಯಕ ಬಡಾವಣೆಯ ನಿವಾಸಿಯಾಗಿದ್ದು, ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಮತ್ತೋರ್ವ ಮೃತ ವ್ಯಕ್ತಿಯನ್ನು ತಾಲ್ಲೂಕಿನ ಸಾಣೆಹಳ್ಳಿ ಗ್ರಾಮದ ಅಜೆಯ (21) ಎಂದು ಗುರುತಿಸಲಾಗಿದೆ. ಈತ ದಿನಗೂಲಿ ನೌಕರನಾಗಿ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ.
ಎಸ್.ಜೆ.ಎಮ್. ಕಾಂಪ್ಲೆಕ್ಸ್ ಮುಂಭಾಗ ರಸ್ತೆ ಮಧ್ಯೆ ಖಾಸಗಿ ಬಸ್ಸೊಂದು ನಿಂತಿದ್ದು, ಅದರ ಪಕ್ಕದಲ್ಲೆ ಟಿ.ಬಿ.ಸರ್ಕಲ್ ಕಡೆಗೆ ಹೋಗಬೇಕಾಗಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದವರು ಕೆಳಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಗಗನಮುಖಿಯಾದ ಅಡಿಕೆ ಬೆಲೆ | ರೈತರಲ್ಲಿ ಕುತೂಹಲ
ಈ ವೇಳೆ ರಂಗಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಜೇಯ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
