
ಚಳ್ಳಕೆರೆ: KSRTC ಬಸ್ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.
ಚಳ್ಳಕೆರೆ ಪಟ್ಟಣದ ಪಾವಗಡ ರಸ್ತೆಯ ಬಳಿ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.
36 ವರ್ಷದ ಪರಮೇಶ್ವರಪ್ಪ ಆತ್ಮಹತ್ಯೆಗೆ ಶರಣಾದ ಬಸ್ ಚಾಲಕ.

ಕಳೆದ ನಾಲ್ಕು ದಿನಗಳಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಪರಮೇಶ್ವರಪ್ಪ, ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಠಾಣೆ ಪೊಲೀಸರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿ, ಸಿಬ್ಬಂದಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
