By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    6 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    6 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    8 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    19 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    18 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    20 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    18 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    19 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: KSRTC ಬಸ್ ನಿಲ್ದಾಣದ ಅಂಗಡಿಗಳಲ್ಲಿ ಅವಧಿ ಮೀರಿದ ನೀರು ಮಾರಾಟ | ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ತೀವ್ರ ಅಸಮಾಧಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

KSRTC ಬಸ್ ನಿಲ್ದಾಣದ ಅಂಗಡಿಗಳಲ್ಲಿ ಅವಧಿ ಮೀರಿದ ನೀರು ಮಾರಾಟ | ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ತೀವ್ರ ಅಸಮಾಧಾನ

News Desk Chitradurga News
Last updated: 27 March 2025 20:24
News Desk Chitradurga News
1 year ago
Share
ಜಿಲ್ಲಾ ಕಾರಾಗೃಹಕ್ಕೆ ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಭೇಟಿ
SHARE

CHITRADURGA NEWS | 27 MARCH 2025

ಚಿತ್ರದುರ್ಗ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರ ತಂಡ ಗುರುವಾರ ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ, ನಗರ ಪೊಲೀಸ್ ಠಾಣೆ, ಜಿಲ್ಲಾ ಕಾರಾಗೃಹ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲಾಸ್ಪತ್ರೆ ಭೇಟಿ: 

ಮೊದಲಿಗೆ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಹೊರ ರೋಗಿಗಳ ವಿಭಾಗ, ಪುರುಷರ ಜನರಲ್ ವಾರ್ಡ್ ಪರಿಶೀಲನೆ ನಡೆಸಿದ ತಂಡ, ರೋಗಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡಿತು. ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಾರೆಯೇ? ಎಷ್ಟು ಸಮಯದಿಂದ ವೈದ್ಯರ ಭೇಟಿಗಾಗಿ ಕಾಯುತ್ತಿದ್ದೀರಿ? ಎಂದು ರೋಗಿಗಳನ್ನು ಪ್ರಶ್ನಿಸಿ ಜಿಲ್ಲಾಸ್ಪತ್ರೆಯ ಕಾರ್ಯವೈಖರಿ ಬಗ್ಗೆ ತಿಳಿದುಕೊಂಡಿತು.

Also Read: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಒದಗಿಸುವಂತೆ ಡಿಸಿಗೆ ಮನವಿ

ಎಷ್ಟು ಜನ ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ? ಇಂಟರ್ನ್‍ಶಿಫ್ ಮಾಡುತ್ತಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು? ಸ್ಟಾಫ್ ನರ್ಸ್ ಸಂಖ್ಯೆ, ಜಿಲ್ಲಾಸ್ಪತ್ರೆಯಲ್ಲಿ ಕೈಗೊಳ್ಳುತ್ತಿರುವ ಶಸ್ತ್ರಚಿಕಿತ್ಸೆಗಳ ವಿವರಗಳನ್ನು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರಿಂದ ಪಡೆದುಕೊಂಡರು.

ಔಷಧಿ ವಿತರಣಾ ಮಳಿಗೆಗೆ ಭೇಟಿ ನೀಡಿ, ಅವಧಿ ಮೀರಿದ ಔಷಧಿಗಳೇನಾದರೂ ಇವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಆದರೆ ಅವಧಿ ಮೀರಿದ ಯಾವುದೇ ಔಷಧಿಗಳು ಅಲ್ಲಿ ಕಂಡುಬರಲಿಲ್ಲ.

ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಜಿಲ್ಲಾಸ್ಪತ್ರೆಗೆ ಭೇಟಿ

ನಂತರ ಶಸ್ತ್ರಚಿಕಿತ್ಸೆ ವಾರ್ಡ್‍ಗಳಿಗೆ ಭೇಟಿ ನೀಡಿ, ಶಸ್ತ್ರಚಿಕಿತ್ಸೆ ಪಡೆದ ರೋಗಿಗಳನ್ನು ವಿಚಾರಿಸಿ, ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಲಭಿಸುತ್ತಿರುವ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಇದ್ದರು.

ವಿದ್ಯಾರ್ಥಿ ನಿಲಯ ಪರಿಶೀಲನೆ:

ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಡುಗೆ ಕೋಣೆ ಪರಿಶೀಲನೆ ನಡೆಸಿ, ಮೆನು ಚಾರ್ಟ್ ಪ್ರಕಾರ ವಿದ್ಯಾರ್ಥಿಗಳಿಗೆ ಊಟ ಪೂರೈಕೆ ಮಾಡಬೇಕು.

Also Read: APMC: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿ ವಿವರ ಹಾಗೂ ದಾಸ್ತಾನು ರಿಜಿಸ್ಟರ್ ಪರಿಶೀಲನೆ ನಡೆಸಿದರು.

ನಂತರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕಿಯರ ಎಸ್.ಸಿ, ಎಸ್.ಟಿ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಹಾಸ್ಟೆಲ್‍ನಲ್ಲಿ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ನೇರವಾಗಿ ಅಡುಗೆ ಕೋಣೆ ಭೇಟಿ ನೀಡಿ, ಅಡುಗೆ ಪದಾರ್ಥಗಳ ಗುಣಮಟ್ಟ ಹಾಗೂ ಅನ್ನ ಸಂಬಾರು ರುಚಿ ನೋಡಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

ಜಿಲ್ಲಾ ಕಾರಾಗೃಹ:

ನಗರದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಪರಿಶೀಲನೆ ನಡೆಸಿದರು. ಜೈಲಿನಲ್ಲಿರುವ ವಿಚಾರಾಣಾಧೀನ ಕೈದಿಗಳ ಮೂಲಭೂತ ಹಕ್ಕುಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಕಾರಾಗೃಹದಲ್ಲಿನ ಊಟ ತಯಾರಿಕಾ ಸ್ಥಳ, ಅಡುಗೆ ಕೋಣೆ ಸೇರಿದಂತೆ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

Also Read: ಚಿತ್ರದುರ್ಗದಲ್ಲಿ ಮೇ.4ರಂದು NEET ಪರೀಕ್ಷೆ | ಸಕಲ ಸಿದ್ದತೆಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ನಂತರ ವಿವಿಧ ಪ್ರಕರಣಗಳಲ್ಲಿ ಜೈಲುವಾಸಿಗಳಾಗಿರುವ ಕೈದಿಗಳನ್ನು ಭೇಟಿಯಾಗಿ ಕಾನೂನು ನೆರವು ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಪಾಟೀಲ್ ಅವರು ಉಪಸ್ಥಿತರಿದ್ದು, ಆಯೋಗದ ಅಧ್ಯಕ್ಷರಿಗೆ ಕಾರಾಗೃಹದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ:

ಚಿತ್ರದುರ್ಗ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‍ಆರ್‍ಟಿಸಿ) ಬಸ್ ನಿಲ್ದಾಣಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣದಲ್ಲಿನ ಅಂಗಡಿಗಳಲ್ಲಿ ಅವಧಿ ಮೀರಿದ ದಿನಾಂಕವಿರುವ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿರುವುದನ್ನು ಗುರುತಿಸಿದ ಆಯೋಗದ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತಂತೆ ಸಮಗ್ರವಾಗಿ ಪರಿಶೀಲಿಸಿ, ಅಂತಹ ಅಂಗಡಿ ಮಾಲೀಕರು ಹಾಗೂ ಕಾಲಕಾಲಕ್ಕೆ ಸಮರ್ಪಕವಾಗಿ ಪರಿಶೀಲಿಸದ ಸಾರಿಗೆ ನಿಗಮದ ಅಧಿಕಾರಿಗಳ ಬಗ್ಗೆ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಬಸ್ ನಿಲ್ದಾಣದಲ್ಲಿನ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರೊಂದಿಗೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇದೆಯಾ? ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ ಎಂದು ಪ್ರಶ್ನಿಸಿದರು. ನಂತರ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ರಾಶಿ ಅಡಿಕೆ ಬೆಲೆ 53 ಸಾವಿರದತ್ತ ದಾಪುಗಾಲು

ತದನಂತರ ಕೆಎಸ್‍ಆರ್‍ಟಿಸಿ ಕ್ಯಾಂಟಿನ್‍ಗೆ ಭೇಟಿ ನೀಡಿ, ಕುಡಿಯುವ ನೀರು, ಆಹಾರ ಪರಿಶೀಲನೆ ನಡೆಸಿದರು. ಯಾವುದೇ ಕಾರಣಕ್ಕೂ ಒಮ್ಮೆ ಕರೆದ ಅಡುಗೆ ಎಣ್ಣೆಯನ್ನು ಮತ್ತೆ ಬಳಕೆ ಮಾಡಬಾರದು ಎಂದು ಕ್ಯಾಂಟಿನ್ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ, ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga Updatescommission chairman T. Sham BhatDistrict Hospitalexpired waterHosteljailKannada Latest NewsKannada NewsKSRTC bus standKSRTC ಬಸ್ ನಿಲ್ದಾಣSaleshopಅಂಗಡಿಅವಧಿ ಮೀರಿದ ನೀರುಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾರಾಗೃಹಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಆಸ್ಪತ್ರೆಮಾರಾಟಹಾಸ್ಟೆಲ್‌
Share This Article
Facebook Email Print
Previous Article ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಒದಗಿಸುವಂತೆ ಡಿಸಿಗೆ ಮನವಿ
Next Article H. Anjaneya ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ | ಉತ್ತಮ ನಿರ್ಧಾರ ಎಚ್.ಆಂಜನೇಯ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up