CHITRADURGA NEWS | 10 FEBRUARY 2026
ಚಿತ್ರದುರ್ಗ: ಹೊಸದುರ್ಗ ಬಸ್ ನಿಲ್ದಾಣದ ವಾಣಿಜ್ಯ ಮಳಿಗೆಯಲ್ಲಿ ಎಂ.ಆರ್.ಪಿ ದರ ರೂ.40 ಇರುವ ತಂಪು ಪಾನೀಯವನ್ನು ರೂ.50ಕ್ಕೆ ಮಾರಾಟ ಮಾಡುತ್ತಿರುವ ಕುರಿತು ಸಾಮಾಜಿಕ ದೃಶ್ಯ ಮಾಧ್ಯಮವಾದ ಪೇಸ್ ಬುಕ್‍ನಲ್ಲಿ ವಿಡಿಯೋ ಬಿತ್ತರವಾಗಿ ಆಕ್ಷೇಪಣೆಗಳು ಕೇಳಿ ಬಂದಿವೆ.
ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ ಗೋವಿಂದ ಕಾರಜೋಳ
ಈ ಹಿನ್ನಲೆಯಲ್ಲಿ ಮಳಿಗೆ ಬಾಡಿಗೆ ಪಡೆದ ಅಂಗಡಿ ಮಾಲೀಕನಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದ ಕರಾರುಗಳು ಉಲ್ಲಂಘನೆಗೆ ಒಪ್ಪಂದ ಕರಾರನ್ನು ಏಕೆ ರದ್ದುಪಡಿಸಬಾರದು ಅಥವಾ ದಂಡ ವಿಧಿಸಬಾರದು ಎಂಬುದರ ಬಗ್ಗೆ 7 ದಿನಗಳಲ್ಲಿ ಲಿಖಿತ ಉತ್ತರ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕರಿ ನೋಟಿಸ್ ನೀಡಿದ್ದಾರೆ.
ಒಂದು ವೇಳೆ ನಿಗದಿತ ದಿನಾಂಕ ಅವಧಿಯೊಳಗಾಗಿ ತಮ್ಮಿಂದ ಯಾವುದೇ ಲಿಖಿತ ಉತ್ತರ ಬಾರದೇ ಇದ್ದಲ್ಲಿ ಏಕ ಪಕ್ಷೀಯವಾಗಿ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 10 ಫೆಬ್ರವರಿ | ಇಂದಿನ ಮಾರುಕಟೆಯಲ್ಲಿ ಅಡಿಕೆ ರೇಟ್
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಳಿಗೆಯಲ್ಲಿ ಎಂ.ಆರ್.ಪಿ ದರಕ್ಕಿಂತ ಹೆಚ್ಚಿನ ಹಣವನ್ನು ಅಂಗಡಿಯವರು ಪಡೆಯುತ್ತಿದ್ದರೆ, ವಿಭಾಗೀಯ ನಿಯಂತ್ರಕರ ಕಚೇರಿಗೆ ಗ್ರಾಹಕರು ದೂರು ನೀಡುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
