ಮುಖ್ಯ ಸುದ್ದಿ
ಚಿತ್ರದುರ್ಗ KSRTC ಡಿಸಿ ವರ್ಗಾವಣೆ
CHITRADURGA NEWS | 07 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ಚಿತ್ರದುರ್ಗ KSRTC ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ಸಿ.ಇ.ಶ್ರೀನಿವಾಸ್ ಮೂರ್ತಿ ಅವರನ್ನೂ ವರ್ಗಾವಣೆ ಮಾಡಿದೆ.
ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆಗೆ 200 KSRTC ಬಸ್
ಶ್ರೀನಿವಾಸ್‍ಮೂರ್ತಿ ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ನಿಯುಕ್ತಿ ಮಾಡಲಾಗಿದೆ.
ತೆರವಾಗಿರುವ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಾನಕ್ಕೆ ಕೆ.ವೆಂಕಟೇಶ್ ಅವರರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ರೈತರು ಮೃತ
ಕೆ.ವೆಂಕಟೇಶ್ ಅವರು, ದಾವಣಗೆರೆ ವಿಭಾಗದ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ಅವ್ಯವಸ್ಥೆ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.