
CHITRADURGA NEWS | 05 JULY 2025
ಚಿತ್ರದುರ್ಗ: ಕರ್ನಾಟಕ ವಿಕಾಸ ರಂಗ(Vikas Ranga)ದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ KSRTC ಎಸ್.ನಟರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
Also Read: ಬೀದಿ ನಾಟಕ, ಜಾನಪದ ಸಂಗೀತ ಪ್ರದರ್ಶನಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ
ಚಿತ್ರದುರ್ಗ ಜಿಲ್ಲೆಗೆ ಕನ್ನಡಾಭಿಮಾನಿ, ಪಬ್ಲಿಕ್ ಹೀರೋ, ಹೆಮ್ಮೆಯ ಕನ್ನಡಿಗ ಕ.ರಾ.ರ.ಸಾ ನಿಗಮದ ಉತೃಷ್ಕ ಸೇವಾ ಪುರಸ್ಕಾರ ಪಡೆದ ರಕ್ತದಾನಿ ಎಸ್.ನಟರಾಜ್ ಅವರನ್ನು ಕರ್ನಾಟಕ ವಿಕಾಸರಂಗದ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವಿಕಾಸರಂಗದ ರಾಜ್ಯಾಧ್ಯಕ್ಷರಾದ ವ.ಚ.ಚನ್ನೇಗೌಡರವರು ತಿಳಿಸಿದ್ದಾರೆ.
ಕರ್ನಾಟಕ ವಿಕಾಸ ರಂಗ(Vikas Ranga)ದ ರಾಜ್ಯಾಧ್ಯಕ್ಷರು ಹಾಗೂ ನಿಕಟಪೂರ್ವ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿಗಳಾದ ವ.ಚ.ಚನ್ನೇಗೌಡರ ನೇತೃತ್ವದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ದೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
