CHITRADURGA NEWS | 23 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್ಪಿ) ಕುಶಲ್ ಚೌಕ್ಸೆ, ಐಪಿಎಸ್ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ, ಕೆ.ಎನ್. 2018 ಬ್ಯಾಚ್‌ನ ಐಪಿಎಸ್ ಅಧಿಕಾರಿ ಶ್ರೀ ಕುಶಲ್ ಚೌಕ್ಸೆ ಅವರು ಬೆಂಗಳೂರಿನ ಪೊಲೀಸ್ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಇದೇ ವೇಳೆ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಂಜಿತ್ ಕುಮಾರ್ ಬಂಡಾರು, ಐಪಿಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಮುಂದಿನ ನಿಯೋಜನೆ ಕುರಿತು ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

