CHITRADURGA NEWS | 25 SEPTEMBER 2025
ಚಿತ್ರದುರ್ಗ : ತಾಲ್ಲೂಕಿನ ರೈತರ ಪಹಣಿ ತಿದ್ದುಪಡಿ ಆಂದೋಲನ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಅಧ್ಯಕ್ಷತೆಯಲ್ಲಿ ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆಯಿತು.
ಇದನ್ನೂ ಓದಿ: ಪಿ.ರಘು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕ
ಅ ಮತ್ತು ಬ ಖರಾಬು ತಿದ್ದುಪಡಿ, ಬಿನ್/ಕೋಂ ಹೆಸರು ತಿದ್ದುಪಡಿ, ಹಿಸ್ಸಾ ತಿದ್ದುಪಡಿ, ಪಹಣಿ ಕಾಲಂ, 3 ಮತ್ತು 9 ವಿಸ್ತೀರ್ಣ ವ್ಯತ್ಯಾಸ ತಿದ್ದುಪಡಿ, ಎಂ.ಆರ್.ರಂತೆ ಮತ್ತು ಪಹಣಿಯಲ್ಲಿನ ಇತರೆ ದೋಷಗಳನ್ನು ಸರಿಪಡಿಸಲಾಯಿತು.
ಇದೆ ತಿಂಗಳ 30 ರವರೆಗೆ ತಿದ್ದುಪಡಿಗೆ ಅವಕಾಶವಿದ್ದು, ರೈತರು ಪ್ರಯೋಜನ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಮನವಿ ಮಾಡಿದರು.
ಇದನ್ನೂ ಓದಿ: ಆಯುರ್ವೇದ ಎಲ್ಲ ಮದ್ದುಗಳ ತಾಯಿ | ಎಂ.ಸಿ.ರಘುಚಂದನ್
ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಶಿರಸ್ತೆದಾರ್ ವತ್ಸಲ ಇವರುಗಳು ಪಹಣಿ ತಿದ್ದುಪಡಿ ಆಂದೋಲನದಲ್ಲಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

