
CHITRADURGA NEWS | 18 SEPTEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಕಛೇರಿ ಆವರಣದಲ್ಲಿ ಸೆ.17 ರಂದು ಪಹಣಿ ತಿದ್ದುಪಡಿ ಅಭಿಯಾನದ ಅಂಗವಾಗಿ ಅ ಮತ್ತು ಬ ಖರಾಬು, ಬಿನ್/ಕೋಂ, ಹಿಸ್ಸಾ, ಪಹಣಿ ಕಾಲಂ 3 ಮತ್ತು 9 ವ್ಯತ್ಯಾಸ (ವಿಸ್ತೀರ್ಣ), ಎಂ.ಆರ್. ಸೇರಿದಂತೆ ಇತರೆ ಪಹಣಿ ತಿದ್ದು ಪಡಿಗಳ ಕಾರ್ಯ ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನಿ ಖುರೇಷಿ ಅವರ ಸಮ್ಮುಖದಲ್ಲಿ ಜರುಗಿತು.
ಇದನ್ನೂ ಓದಿ: ಮೊಳಕಾಲ್ಮೂರು ಜವಳಿ ಪಾರ್ಕ್ ಮಾಡಲು ಸಹಕಾರ | ಕೆ.ಎಸ್.ನವೀನ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೆ.01 ರಿಂದ 15 ದಿನಗಳ ಕಾಲ ಪಹಣಿಯಲ್ಲಿರುವ ಸಣ್ಣಪುಟ್ಟ ತಿದ್ದುಪಡಿ ಕೈಗೊಳ್ಳಲು ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ ಸೆ.17 ರಂದು ಹಿರಿಯೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಒಟ್ಟು 250 ಪಹಣಿ ತಿದ್ದುಪಡಿ ಪ್ರಕರಣಗಳನ್ನು ಸರಿಪಡಿಸಿ ಅನುಮೋದಿಸಲಾಗಿದೆ.
ಈ ಸಂಧರ್ಭದಲ್ಲಿ ತಹಶೀಲ್ದಾರ್ ಎಂ.ಸಿದ್ದೇಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಲಕ್ಷ್ಮೀನರಸಿಂಹಯ್ಯ ಸೇರಿದಂತೆ ತಾಲ್ಲೂಕಿನ ರೈತರು ಹಾಜರಿದ್ದು ವಿಶೇಷ ಪಹಣಿ ತಿದ್ದುಪಡಿ ಅಭಿಯಾನದ ಪ್ರಯೋಜನ ಪಡೆದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
