CHITRADURGA NEWS | 11 NOVEMBER 2025
ಚಿತ್ರದುರ್ಗ: ಸಿವಿಲ್ ಪ್ರಕರಣಗಳ ಕರಡು ರಚನೆಗೆ ಭಾಷಾ ಕೌಶಲ್ಯ ಅತಿ ಮುಖ್ಯವಾಗಿದೆ. ಸರಳವಾಗಿ ಮಾತೃಭಾಷೆ ಕನ್ನಡದಲ್ಲಿ ಪ್ರಕರಣದ ಕರಡು ಸಿದ್ಧಪಡಿಸಿದರೆ ಅನಗತ್ಯವಾಗಿ ಉಂಟಾಗುವ ಗೊಂದಲಗಳನ್ನು ನಿವಾರಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ರೋಣ್ ವಾಸುದೇವ ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಂಜಾರ ಸಮುದಾಯಕ್ಕೆ MLC, ಸಚಿವ ಸ್ಥಾನಕ್ಕೆ ಸೇವಾಲಾಲ್ ಸ್ವಾಮೀಜಿ ಒತ್ತಾಯ
ನಗರದ ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ಸಂಜೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ, ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ, ಸಿವಿಲ್ ಪ್ರಕರಣಗಳಲ್ಲಿ ಡ್ರಾಪ್ಟಿಂಗ್ ಕೌಶಲ್ಯ ಕುರಿತು ಅವರು ಉಪನ್ಯಾಸ ನೀಡಿದರು.
ಆಸ್ತಿ ಹಕ್ಕಿಗಾಗಿ ಕಕ್ಷಿದಾರರು ಸಿವಿಲ್ ದಾವೆಗಳನ್ನು ನ್ಯಾಯಾಲಯಗಳಲ್ಲಿ ಹೂಡುತ್ತಾರೆ. ಕ್ರಿಮಿನಲ್ ಪ್ರಕರಣಗಳಲ್ಲಿ ನೇರವಾಗಿ ಕಾಯ್ದೆಗಳನ್ನು ಉಲ್ಲೇಖಿಸಿ ಕಕ್ಷಿದಾರರ ಪ್ರಕರಣದ ಕರಡು ಸಿದ್ದಪಡಿಸಬಹುದು. ಆದರೆ ಸಿವಿಲ್ ಪ್ರಕರಣಗಳಲ್ಲಿ ಕಾಯ್ದೆಗಳ ಉಲ್ಲೇಖಿಸುವುದರಿಂದ ಗೊಂದಲ ಹೆಚ್ಚಾಗುತ್ತದೆ. ಇದರ ಬದಲಿಗೆ ಸರಳವಾಗಿ ಕಕ್ಷಿದಾರರ ಪರವಾದ ವಿಷಯಗಳನ್ನು ಕರಡಿನಲ್ಲಿ ಸ್ಪಷ್ಟಪಡಿಸಬೇಕು. ಕ್ಲಿಷ್ಟಕರ ಶಬ್ದಗಳನ್ನು ಬಳಸಬಾರದು.
ಅಸಲು ದಾವೆ ಮಾಹಿತಿಗಳನ್ನು ಕರಡಿನಲ್ಲಿ ನೀಡಿದರೆ ಸಾಕು, ಅನಗತ್ಯವಾಗಿ ದೊಡ್ಡ ಕರಡು ರಚನೆ ಮಾಡಬಾರದು. ವ್ಯಾಜ್ಯದ ಕರಡು ನ್ಯಾಯಧೀಶರು ಸುಲಭವಾಗಿ ಅರ್ಥವಾದರೆ ಪಕ್ರರಣಗಳಲ್ಲಿ ಬೇಗ ಪರಿಹಾರದ ದೊರಕುವುದು. ಕಕ್ಷಿದಾರರ ಸಮಯವು ವ್ಯರ್ಥವಾಗುವುದಿಲ್ಲ ಎಂದು ರೋಣ್ ವಾಸುದೇವ ಹೇಳಿದರು.
ಇದನ್ನೂ ಓದಿ: ಓಬವ್ವನ ತ್ಯಾಗ, ಸಾಹಸ, ಧೈರ್ಯ ಇಂದಿನ ಮಹಿಳೆಯರಿಗೆ ಸ್ಫೂರ್ತಿ | ADC ಬಿ.ಟಿ.ಕುಮಾರಸ್ವಾಮಿ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿನ ದುರ್ಬಲ ಹಾಗೂ ನಿಮ್ನ ವರ್ಗದವರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ.
ಪೊಕ್ಸೋ, ಬಾಲ್ಯವಿವಾಹ ಸೇರಿದಂತೆ ಸಾಮಾಜಿಕ ಪಿಡುಗುಗಳ ಕುರಿತು ಪ್ರಸಕ್ತ ವರ್ಷದಲ್ಲಿ 300 ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 3 ಲೋಕ ಅದಾಲತ್ನಲ್ಲಿ 11,744 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಇದರ ಹೊರತಾಗಿ ಜಿಲ್ಲಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯುವಂತೆ ಕಾಳಜಿ ವಹಿಸಲಾಗಿದೆ.
ಬಸ್ ಸಂಪರ್ಕ ಕಾಣದ ಜೆ.ಎನ್.ಕೋಟೆ ಗೊಲ್ಲರಹಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ದೊರಕಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಪ್ರಮುಖ ಪಾತ್ರ ವಹಿಸಿದೆ. ಪ್ರಾಧಿಕಾರದೊಂದಿಗೆ 91 ಪ್ಯಾನಲ್ ವಕೀಲರು, 8 ಕಾನೂನು ಅಭಿರಕ್ಷಕರು ಹಾಗೂ 90 ನ್ಯಾಯಿಕ ಸಹಾಯಕರು ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಸ್ವ ಸಹಾಯ ಗುಂಪಿಗೆ ರಾಜ್ಯ ಪ್ರಶಸ್ತಿ | ಜಿ.ಪಂ. ಸಿಇಓ ಅಭಿನಂದನೆ
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಮಹೇಶ್ವರಪ್ಪ, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳಾದ ವೀರಣ್ಣ ಸೋಮಶೇಖರ್, ಗಂಗಾಗಧರ ಚನ್ನಬಸಪ್ಪ ಹಡಪದ್, ಮಮತ.ಡಿ, ಚೈತ್ರ ಎ.ಎಂ, ಉಜ್ವಲ ವೀರಣ್ಣ ಸಿದ್ದಣ್ಣವರ್, ರಶ್ಮಿ ಎಸ್ ಮರಡಿ, ಪೂಜಾ ಬೆಳಕೇರಿ, ನಿಖಿತಾ ಎಸ್ ಅಕ್ಕಿ, ಆರ್.ಸಹನಾ, ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ್ ಗುಂಡೇರಿ ಸೇರಿದಂತೆ ವಕೀಲರು, ಕಾನೂನು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

