Connect with us

    ಮತದಾರರ ಪಟ್ಟಿಗೆ ಹೆಸರು ಸೇರಿಸಲು ಲಾಸ್ಟ್ ಚಾನ್ಸ್ | ಇಂದೇ ಕಡೆಯ ದಿನ

    ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ಲೋಕಸಮರ 2024

    ಮತದಾರರ ಪಟ್ಟಿಗೆ ಹೆಸರು ಸೇರಿಸಲು ಲಾಸ್ಟ್ ಚಾನ್ಸ್ | ಇಂದೇ ಕಡೆಯ ದಿನ

    CHITRADURGA NEWS | 25 MARCH 2024

    ಚಿತ್ರದುರ್ಗ: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮಾರ್ಚ್ 25 ಕಡೆಯ ದಿನವಾಗಿದೆ. ಚುನಾವಣೆ ಆಯೋಗಕ್ಕೆ ಕಳುಹಿಸಿದ ಜಿಲ್ಲೆಯ 1661 ಮತಗಟ್ಟೆಗಳ ಪಟ್ಟಿಗೆ ಅನುಮೋದನೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಹೇಳಿದರು.

    ಇದನ್ನೂ ಓದಿ: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಶುಭ ಸುದ್ದಿ | ಉಚಿತ 4ಜಿ ಸಿಮ್ ಬದಲಾವಣೆ

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

    ನಮೂನೆ-6ರಲ್ಲಿ ಮತಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹದು. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಸಹ ಪರಿಗಣಿಸಲಾಗುವುದು. ನಮೂನೆ 8 ಸಲ್ಲಿಸುವ ತಿದ್ದುಪಡಿ ಅವಧಿ ಮುಕ್ತಾಯವಾಗಿದೆ. ಈಗಾಗಲೇ ಮತಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು. ಮೃತಪಟ್ಟ ಹಾಗೂ ಸ್ಥಳಾಂತರಗೊಂಡ ಹೆಸರುಗಳನ್ನು ಮತ ಪಟ್ಟಿಯಿಂದ ತೆಗೆದುಹಾಕಲಾಗಿದೆ.

    ಇದನ್ನೂ ಓದಿ: ಗೂಡ್ಸ್ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ

    ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ 17,723 ಮತದಾರರಿದ್ದಾರೆ. ಚುನಾವಣೆ ಆಯೋಗ ಇವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಬಿ.ಎಲ್.ಒ(ಮತಗಟ್ಟೆ ಅಧಿಕಾರಿ)ಗಳು ಮನೆ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟವರಿಗೆ ಫಾರಂ12 ಡಿ, ನೀಡಿ ಸ್ವೀಕೃತಿ ಪಡೆಯುತ್ತಿದ್ದಾರೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಿಲ್ಲದ ಹಾಸಿಗೆ ಹಿಡಿದ ವೃದ್ಧರು ಮನೆಯಿಂದಲೇ ಮತ ಚಲಾಯಿಸಲು ಆಯ್ಕೆ ಮಾಡಿಕೊಳ್ಳಬಹುದು.

    ಇದೇ ಮಾದರಿಯಲ್ಲಿ ಶೇ.40 ಕ್ಕಿಂತಲೂ ಹೆಚ್ಚಿನ ಅಂಗವೈಕಲ್ಯ ಇರುವ ವಿಕಲಚೇತನರಿಗೂ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 31926 ವಿಕಲಚೇತನ ಮತದಾದರು ಇದ್ದು, ಇವರಿಗೆ ಫಾರಂ 12 ಡಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ.

    ಇದನ್ನೂ ಓದಿ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮ | ಶೀಘ್ರ ಪಠ್ಯಪುಸ್ತಕ ಬಿಡುಗಡೆ

    ಮನೆಯಿಂದ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡವರ ವಿವರಗಳನ್ನು ಆಯಾ ಕ್ಷೇತ್ರವಾರು ಸಹಾಯಕ ಚುನಾವಣಾ ಅಧಿಕಾರಿಗಳು ಪ್ರತ್ಯೇಕ ಪಟ್ಟಿ ಸಿದ್ದಪಡಿಸುವರು. ಮತದಾರರ ಭೌಗೋಳಿಕ ಸಾಮ್ಯತೆ ಆಧರಿಸಿ ಮತದಾನಕ್ಕೆ ಅನುಕೂಲವಾಗುವಂತೆ ಮಾರ್ಗಗಳನ್ನು ರಚಿಸಲಾಗುವುದು. ಮತಗಟ್ಟೆ ಅಧಿಕಾರಿಗಳು ಮನೆ ಬಾಗಿಲಿಗೆ ತೆರಳಿ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲು ಅವಕಾಶ ನೀಡುವರು.

    ಮನೆಯಿಂದ ಮತದಾನ ಮಾಡುವ ಮೊದಲ ದಿನದಂದು ಯಾರಾದರು ಮತದಾನದಿಂದ ಪ್ರಕ್ರಿಯೆಯಿಂದ ತಪ್ಪಿಹೊದರೇ, ಎರೆಡನೇ ಬಾರಿ ಮನೆ ಬಾಗಿಲಿಗೆ ತೆರಳಿ ಮತದಾನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವಿವರಗಳನ್ನು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳಿಗೆ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೀಡುವರು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

    ಇದನ್ನೂ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ

    ಜಿಲ್ಲೆಯಲ್ಲಿ 3861 ಅಗತ್ಯ ಸೇವಾ ಮತದಾರರು ಇದ್ದು, ಇವರಿಗೂ ಫಾರಂ 12 ಡಿ ನೀಡಲಾಗಿದೆ. ಇವರಿಗೆ ಮತದಾನದ ಪೂರ್ವದಲ್ಲಿ 3 ದಿನಗಳ ಕಾಲ ಪೆಸಿಲಿಟಿ ಸೆಂಟರ್ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಈಗಾಗಲೇ 30 ಸಾವಿರಕ್ಕೂ ಅಧಿಕ ಮತದಾದರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ರವಾನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

    ಇದನ್ನೂ ಓದಿ: ಮುತ್ತುಗದ ಮರ ಮೈ ತುಂಬಾ ಹೂ ಬಿಟ್ಟರೆ ಏನರ್ಥ ಗೊತ್ತಾ

    ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಸಿ.ಜಿ.ನಾಸಿರುದ್ದೀನ್, ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಯಶವಂತ್ ಕುಮಾರ್, ಜೆಡಿಎಸ್ ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ, ಡಿ.ಗೋಪಾಲಸ್ವಾಮಿ ನಾಯಕ್, ಬಿ.ಎಸ್.ಪಿ ಪಕ್ಷದ ಲಕ್ಷ್ಮಮ್ಮ, ಸಿಪಿಎಂ ಪಕ್ಷದ ಸುರೇಶ್ ಬಾಬು ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಲೋಕಸಮರ 2024

    To Top