CHITRADURGA NEWS | 09 FEBRUARY 2026
ಚಳ್ಳಕೆರೆ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗ್ರಾಮ ಪಂಚಾಯತಿ ಸದಸ್ಯರ ತಂಡ ಆದ್ಯತೆ ಮೇಲೆ ಕೆಲಸ ಮಾಡಲಾಗಿದ್ದು ನಮ್ಮ ಶಕ್ತಿ ಮೀರಿ ಶ್ರಮಿಸಿದ್ದೇವೆ ಎಂದು ಕಾಲುವೇಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 09 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಚಳ್ಳಕೆರೆ ತಾಲೂಕಿನ ಕಾಲುವೇಹಳ್ಳಿ ಗ್ರಾಮ ಪಂಚಾಯತಿ ಅವಧಿಯ ಕೊನೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದರು.
ನರೇಗಾದಡಿಯಲ್ಲಿ ಸಾರ್ವಜನಿಕರಿಗೆ ಕುರಿ ಮತ್ತು ದನದ ಕೊಟ್ಟಿಗೆ ನಿರ್ಮಾಣ, ಜಮೀನುಗಳ ಬದು ನಿರ್ಮಾಣ, ಕೃಷಿ ಹೊಂಡಗಳು, ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನರೇಗಾ ಕಾರ್ಯಕ್ರಮದಡಿ ನೂರಾರು ಕೆಲಸಗಳನ್ನು ಸ್ವಯಂ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಕೈಗೊಳ್ಳಾಗಿವೆ ಎಂದರು.
ನಮ್ಮ ಅವಧಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ತಂಡ ಎಲ್ಲರೊಂದಿಗೆ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಿದ್ದರಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಾಟರ್ ಫಿಲ್ಟರ್ ವ್ಯವಸ್ಥೆ ಮಾಡಲಾಗಿದೆ. ಊಟದ ಹಾಲ್ ಹಾಗೂ ಶೌಚಾಲಯ ನಿರ್ಮಾಣ ಕೊನೆಯ ಹಂತದಲ್ಲಿದೆ.
ಇದನ್ನೂ ಓದಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ | ನಾಲ್ವರು ಪ್ರಧಾನ ಕಾರ್ಯದರ್ಶಿಗಳು | ಕೆ.ಟಿ.ಕುಮಾರಸ್ವಾಮಿ ಪ್ರಕಟಣೆ
ಕಾಲುವೆಹಳ್ಳಿ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಲಾಗಿದೆ, ಗೌಡರಹಟ್ಟಿ ಗ್ರಾಮದಲ್ಲಿ ಪ್ರತಿಯೊಂದು ಮನೆಗೂ ನಳ ಸಂಪರ್ಕ ಗ್ರಾಮ ಪಂಚಾಯತಿ ಅನುದಾನದಲ್ಲಿ ಮಾಡಲಾಯಿತು.
ನಮ್ಮ ಹೊಲ ನಮ್ಮ ರಸ್ತೆ ನಿರ್ಮಾಣ ಮಾಡಲಾಗಿದೆ, ಎಲ್ಲ ಗ್ರಾಮಗಳಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಗ್ರಾಮ ಪಂಚಾಯತಿಯ ಆವರಣದಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ.
ಸುಮಾರು 8 ಕಿಲೋಮೀಟರ್ ಹಳ್ಳದ ಉಳು ತೆಗೆಯುವ ಕೆಲಸವನ್ನು ಮಾಡುವ ಮುಖಾಂತರ ಮತ್ತು ಚಕ್ ಡ್ಯಾಂ ಗಳ ನಿರ್ಮಾಣದಿಂದ ನಮ್ಮ ಭಾಗದ ಅಂತರ್ಜಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ. ಹೈ ಮಾಸ್ಕ್ ದೀಪಗಳನ್ನು ಅಳವಡಿಸುವ ಮೂಲಕ ಗ್ರಾಮದ ದೊಡ್ಡ ಕಾರ್ಯಕ್ರಮಗಳಿಗೆ ಅನುಕೂಲವಾಗಿದ್ದು ನಮ್ಮ ಸಿಕ್ಕ ಅವಕಾಸವನ್ನು ಸದುಪಯೋಗ ಮಾಡಿಕೊಂಡ ತೃಪ್ತಿ ನಮಗಿದೆ ಎಂಬ ಭಾವನೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಾಲಗೌರವ ಪ್ರಶಸ್ತಿ | ಅರ್ಜಿ ಅಹ್ವಾನ
ಸಭೆಯಲ್ಲಿ ಅಧ್ಯಕ್ಷೆ ದ್ರಾಕ್ಷಾಯಿಣಿ ಗಾದ್ರಿ ಪಾಲಯ್ಯ , ಉಪಾಧ್ಯಕ್ಷೆ ಮುಕ್ಕಣ್ಣ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಾಲಯ್ಯ, ಗ್ರಾಮ ಪಂಚಾಯತಿ ಸದಸ್ಯರಾದ ಗಾದ್ರಿಪಾಲಯ್ಯ, ಜಂಪಣ್ಣ, ತಿಪ್ಪೇಸ್ವಾಮಿ ,ಬೊಮ್ಮಜ್ಜ, ಮಂಜುನಾಥ್, ಲಕ್ಷ್ಮೀದೇವಿ, ತ್ರಿವೇಣಮ್ಮ ,ತಿಪ್ಪಕ್ಕ, ಶಾಂತಮ್ಮ, ಸುನಂದಮ್ಮ, ರೇಣುಕಾ ಮತ್ತು ಪಿಡಿಓ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
