CHITRADURGA NEWS | 21 JULY 2026
ಚಿತ್ರದುರ್ಗ: ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಬಂಧನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್‍ನಿಂದ ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ
ನೀಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಶಿಕ್ಷಿಸುವಂತೆ ಸೋನಂ ವಾಂಗ್ಚುಕ್ ದೆಹಲಿಯ ಜಂತರ್ ಮಂತರ್‍ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಕ್ಕೆ ಬೆಂಬಲಿಸಿ ಸೋಮವಾರ ಪ್ರತಿಭಟನೆ ನಡೆಸಿದ ಸಹಸ್ರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿರುವುದನ್ನು ವಿರೋಧಿಸಿ, ಮೋದಿ ನಿವಾಸದ ಎದುರು ಧರಣಿ ನಡೆಸಿದ ರಾಹುಲ್‍ಗಾಂಧಿಯನ್ನು ಬಂಧನದಿಂದ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಪ್ರಧಾನಿ ಮೋದಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಹುಲ್‍ಗಾಂಧಿಯನ್ನು ಬಂಧಿಸಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಧಿಕ್ಕಾರಗಳನ್ನು ಕೂಗಿದರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಪ್ರತಿಭಟನೆಯಲ್ಲಿ ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿ.ವಿ.ಮಧುಗೌಡ, ಮುತ್ತು, ಆಶ್ರಯ ಕಮಿಟಿ ಸದಸ್ಯ ಉಮೇಶ್, ಮಾಳೇಶ್, ರಾಜಪ್ಪ, ಹರೀಶ್, ರಘುನಾಥ್, ಕೆ.ರುದ್ರಮುನಿ, ಮಹೇಶ್, ಮಂಜುನಾಥ್ ಆರ್, ಪ್ರಸನ್ನ, ವಿಜಯ ಸೇರಿದಂತೆ ಇತರರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

