CHITRADURGA NEWS | 22 JULY 2026
ಚಿತ್ರದುರ್ಗ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಲೋಪಗಳನ್ನು ಸರಿಪಡಿಸಲು ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್‌ಮಂತರ್ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಅಮಾನುಷವಾಗಿ ನಡೆಸಿದ ಲಾಠಿ ಪ್ರಹಾರ ಖಂಡನೀಯ ಎಂದು ಚಳ್ಳಕೆರೆ ಶಾಸಕ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉನ್ನತ ಶಿಕ್ಷಣದ ಆಸೆ ಹೊತ್ತಿರುವ ಲಕ್ಷಾಂತರ ಆಕಾಂಕ್ಷಿಗಳ ಕನಸು ಕಮರಿ ಹೋಗಿದೆ. ಇದನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ, ಜಲಫಿರಂಗಿಗಳ ಮೂಲಕ ಪ್ರಹಾರ ನಡೆಸಿರುವುದು ಸರಿ ಇಲ್ಲ ಎಂದು ತಿಳಿಸಿದರು.
ಸೋನಮ್ ವಾಂಗ್‌ಚುಕ್ ನಡೆಸುತ್ತಿದ್ದ ನಿರಶನಕ್ಕೆ ಲಕ್ಷಾಂತರ ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಹೋರಾಟ ದಮನ ಮಾಡಲು ಮುಂದಾಗಿರುವುದ ಸರಿಯಲ್ಲ ಎಂದು ತಿಳಿಸಿದರು.
ಇದಕ್ಕೆಲ್ಲ ಕಾರಣವಾಗಿರುವುದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಸಮರ್ಥತೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಲಕ್ಷ್ಯ ಧೋರಣೆ ಎಂದು ಶಾಸಕರು ವಿವರಿಸಿದರು.
ಇದನ್ನೂ ಓದಿ: ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
ನಾವೆಲ್ಲರೂ ಜಂಟಿಯಾಗಿ ನೀಟ್ ಆಕಾಂಕ್ಷಿಗಳ ಪರವಾಗಿ ದನಿ ಎತ್ತಬೇಕಾಗಿದೆ. ಅವರ ಪರವಾಗಿ ನಿಲ್ಲಬೇಕಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಕರೆ ನೀಡಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

