Connect with us

    ಚಿತ್ರದುರ್ಗ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮೊದಲ ದಿನ ಎಷ್ಟು ಮಹಿಳೆಯರ ಖಾತೆಗೆ ಹಣ ಬಂತು ಗೊತ್ತಾ..

    Launch of Grilahakshmi Yojana

    ಮುಖ್ಯ ಸುದ್ದಿ

    ಚಿತ್ರದುರ್ಗ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮೊದಲ ದಿನ ಎಷ್ಟು ಮಹಿಳೆಯರ ಖಾತೆಗೆ ಹಣ ಬಂತು ಗೊತ್ತಾ..

    ಚಿತ್ರದುರ್ಗ ನ್ಯೂಸ್:

    • ಗೃಹಲಕ್ಷ್ಮೀ ಫಲಾನುಭವಿಗಳ ಸಂಖ್ಯೆಯಲ್ಲಿ ಚಿತ್ರದುರ್ಗ ರಾಜ್ಯಕ್ಕೆ 2ನೇ ಸ್ಥಾನ
    • ಮೊದಲ ದಿನವೇ 1,20,403 ಮಹಿಳೆಯರ ಖಾತೆಗೆ ಬಂದ ಲಕ್ಷ್ಮೀ
    • ಚಿತ್ರದುರ್ಗ ಜಿಲ್ಲೆಯಲ್ಲಿ 3.54 ಲಕ್ಷ ಮಹಿಳೆಯರ ನೊಂದಣಿ.

    ಗೃಹಲಕ್ಷ್ಮೀ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಮೊದಲ ದಿನವೇ ಚಿತ್ರದುರ್ಗ ಜಿಲ್ಲೆಯ 1,20,403 ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಬಂದು ಜಮೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಯೋಜನೆಗಾಗಿ ಈವರೆಗೆ ಒಟ್ಟು 3.54 ಲಕ್ಷ ಮಹಿಳೆಯರು ನೊಂದಾಯಿಸಿಕೊಂಡಿದ್ದು, ಈ ಸಂಖ್ಯೆ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.

    ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಾಂಕೇತಿಕವಾಗಿ ಮಂಜೂರಾತಿ ಪತ್ರ ವಿತರಣೆ ಮೂಲಕ ಯೋಜನೆಗೆ ಚಾಲನೆ ನೀಡಿದರು. ಇದೇ ವೇಳೆ ಮೈಸೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಯೋಜನೆಗೆ ಚಾಲನೆ ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಗೆ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

    ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಡಿ.ಸುಧಾಕರ್ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ ಸರ್ಕಾರ ಅತಿದೊಡ್ಡ ಗ್ಯಾರೆಂಟಿಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಸದಾ ಬದ್ಧವಾಗಿದೆ ಎಂದರು.

    ಈಗಾಗಲೇ ಜಾರಿ ಮಾಡಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆ ಯಶಸ್ವಿಯಾಗಿದ್ದು, ಇದರಿಂದ ನಷ್ಟದಲ್ಲಿದ್ದ ಕೆಎ

    ಸ್‍ಆರ್‍ಟಿಸಿ ಸಂಸ್ಥೆ ಲಾಭದತ್ತ ಹೊರಳಿದೆ. ಈಗ ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂ.ಗಳನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡುತ್ತಿದ್ದು, ಇದು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು.

    ಗೃಹಲಕ್ಷ್ಮೀ ಯೋಜನೆ ನೊಂದಣಿಗೆ ಯಾವುದೇ ಕಾಲಮಿತಿ ಇಲ್ಲ. ಅರ್ಹರು ಈಗಲೂ ಅರ್ಜಿ ಸಲ್ಲಿಸುವುದರ ಮೂಲಕ ಯೋಜನೆಯ ಲಾಭ ಪಡೆಯಬಹುದು. 2014 ರಿಂದ 2018 ವರೆಗೆ ಅಧಿಕಾರ ನಡೆಸಿದ ನಮ್ಮ ಪಕ್ಷದ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ 168 ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ಪ್ರಣಾಳಿಕೆಯಲ್ಲಿ ನೀಡಿದ ಅಷ್ಟು ಭರವಸೆಗಳನ್ನು ಈಡೇರಿಸಲಾಗುವುದು. ಈಗಾಗಲೆ ನಾವು ನೀಡಿದ ಗ್ಯಾರಂಟಿ ಭರವಸೆಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇ Launch of Grilahakshmi Yojanaಸಿದ್ದೇವೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ 1.10 ಕೋಟಿ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೇರವಾಗಿ ಖಾತೆ ಜಮೆ ಮಾಡಲಾಗುವು

    ದು. ಜಿಲ್ಲೆಯಲ್ಲಿ ಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮಹಿಳೆಯರು ಇದರ ಲಾಭಗಳನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

    ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಒಟ್ಟು 3.54 ಲಕ್ಷ ಮಹಿಳೆಯರು ನೊಂದಣಿ ಮಾಡಿಸಿದ್ದು, ಫಲಾನುಭವಿಗಳ ನೋಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ ಎಂದರು.

    ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ ಮಾತನಾಡಿ ಸರ್ಕಾರ ಘೋಷಿಸಿದ 5 ಖಾತ್ರಿ ಯೋಜನೆ ಪೈಕಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಈಗ ಗೃಹಲಕ್ಷ್ಮಿ ಸೇರಿದಂತೆ ನಾಲ್ಕು ಖಾತ್ರಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 100 ದಿನದ ಒಳಗಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಗೃಹಲಕ್ಷ್ಮೀ ಯೋಜನೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯತಿಗಳಲ್ಲಿಯೂ ಮೈಸೂರಿನ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಿದ್ದಾರೆ ಎಂದು ಹೇಳಿದರು.

    ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ನಮಗೆ ಪ್ರತಿ ತಿಂಗಳು 2 ಸಾವಿರ ಸಿಗುತ್ತದೆ. ಇದರಿಂದ ಮನೆಯ ಸಣ್ಣ ಪುಟ್ಟ ಖರ್ಚುಗಳಿಗೆ ಇತರರ ಮುಂದೆ ಕೈ ಚಾಚುವ ಸ್ಥಿತಿ ತಪ್ಪಿದೆ. ಈ ಯೋಜನೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದಂತೆ ಮುಂದುವರೆಸಿಕೊಂಡು ಹೋಗಬೇಕು.
    | ಕಮಲಮ್ಮ, ಕೆಳಗೋಟೆ, ಚಿತ್ರದುರ್ಗ.

    ಪ್ರತಿ ತಿಂಗಳು 2 ಸಾವಿರ ರೂ. ಸರ್ಕಾರ ನಮಗೆ ಕೊಡುವ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿ, ಪ್ರತಿ ದಿನ ದುಡಿದು ಜೀವನ ಸಾಗಿಸುವ ನಮ್ಮಂತಹ ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.
    | ನಸೀರಾ ಬಿ., ನೆಹರು ನಗರ, ಚಿತ್ರದುರ್ಗ

     

    (ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

    (ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)


    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top