
CHITRADURGA NEWS | 04 NOVEMBER 2024
ಚಿತ್ರದುರ್ಗ: ಸರ್ಕಾರಿ ಅಭಿಯೋಜಕ ಜಗದೀಶ್ ಅವರ ಕಾರು ಭೀಕರ ಅಪಘಾತವಾಗಿದ್ದು, ಅದೃಷ್ಟವಶಾತ್ ಜಗದೀಶ್ ಹಾಗೂ ಅವರ ಕುಟುಂಬ ಪ್ರಾಣಾಪಯಾದಿಂದ ಪಾರಾಗಿದೆ.
ಹಿರಿಯೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜವನಗೊಂಡನಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಅತ್ತೆ ಮಾವನ ಕೊಲೆ ಮಾಡಿದ್ದ ಅಳಿಯನ ಬಂಧನ | ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ತಲಾಶ್..!
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಬರುವಾಗ ಈ ಘಟನೆ ನಡೆದಿದ್ದು, ಹಿಂಬದಿಯಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ನ.3 ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಗದೀಶ್, ಅವರ ಪತ್ನಿ ನಾಗವೇಣಿ ಹಾಗೂ ಸಹೋಧರಿ ಲತಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮದ್ದೇರಿನಲ್ಲಿ ದೇವಸ್ಥಾನ ಉದ್ಘಾಟನೆ | ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ
ಪೋಕ್ಸೋ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಜಗದೀಶ್ ವಾದ ಮಾಡುತ್ತಿದ್ದರು. ಇತ್ತೀಚೆಗೆ ಮುರುಘಾ ಶರಣರ ಪ್ರಕರಣದಲ್ಲೂ ಜಗದೀಶ್ ಸಮರ್ಥವಾಗಿ ವಾದ ಮಂಡಿಸಿ ಹೆಸರಾಗಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
