ಮುಖ್ಯ ಸುದ್ದಿ
Advocates: ವಕೀಲರ ದಿನಾಚರಣೆ | ಸಾರ್ಥಕ ಸೇವೆ ಸಲ್ಲಿಸಿದ ನ್ಯಾಯವಾದಿಗಳಿಗೆ ಸನ್ಮಾನ


CHITRADURGA NEWS | 03 DECEMBER 2024
ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದಿಂದ ವಕೀಲರ ದಿನಾಚರಣೆ-2024 ಹಾಗೂ ವಕೀಲಿ ವೃತ್ತಿಯಲ್ಲಿ 50 ಮತ್ತು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ ನ್ಯಾಯವಾದಿಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಇಂದು (ಡಿಸೆಂಬರ್ 3) ಸಂಜೆ 6.30ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ: PDO ನೇಮಕಾತಿಗೆ ಪರೀಕ್ಷೆ | ಅಗತ್ಯ ಸಿದ್ಧತೆ ಪೊಲೀಸರ ನಿಯೋಜನೆಗೆ ಸೂಚನೆ
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ವಕೀಲರ ಸಂಘದ ಅಧ್ಯಕ್ಷರಾದ ವೈ.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಎಚ್.ಕಾಂತರಾಜು, ನ್ಯಾಯಾಧೀಶರಾದ ಶಂಕ್ರಪ್ಪ ನಿಂಬಣ್ಣ ಕಲ್ಕಣಿ, ಸಿ.ಎಚ್.ಗಂಗಾಧರ, ಡಿ.ಮಮತಾ, ವಕೀಲರ ಸಂಘದ ಉಪಾಧ್ಯಕ್ಷರಾದ ಬಿ.ಎಂ.ಅನೀಲ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಕಾನೂನು ಕಾಲೇಜುಗಳ ಚೆಸ್ ಸ್ಪರ್ಧೆ | ಬೆಂಗಳೂರು, ಹುಬ್ಬಳ್ಳಿ ತಂಡಗಳಿಗೆ ಪ್ರಶಸ್ತಿಯ ಗರಿ
ವೇದಿಕೆ ಕಾರ್ಯಕ್ರಮದ ನಂತರ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಕೀಲರ ಸಂಘದ ಪ್ರಕಟಣೆ ತಿಳಿಸಿದೆ.
