CHITRADURGA NEWS | 05 SEPTEMBER 2025
ಸಾಮಾನ್ಯವಾಗಿ ಕೆಲವರ ಮುಖದಲ್ಲಿ ಮೊಡವೆಗಳು, ಕಲೆಗಳು, ಮಂದ ಚರ್ಮ ಮತ್ತು ಟ್ಯಾನಿಂಗ್ ನಂತಹ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಕಂಡುಬರುತ್ತವೆ. ಅಂತವರು ಈ ಸಮಸ್ಯೆಗಳಿಂದ ಪರಿಹಾರ ಪಡೆಯಲು ಪೇರಳೆ ಎಲೆಗಳನ್ನು ಬಳಸಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಪೇರಳೆ ಎಲೆಗಳು ವಿಟಮಿನ್-ಸಿ ನಂತಹ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ.
ಜೊತೆಗೆ, ಆಂಟಿ-ಆಕ್ಸಿಡೆಂಟ್‌ಗಳು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಗಳನ್ನು ಹೊಂದಿರುತ್ತವೆ. ಇವು ಚರ್ಮಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ. ಪೇರಳೆ ಎಲೆಗಳನ್ನು ಚರ್ಮದ ಮೇಲೆ ಹಲವು ವಿಧಗಳಲ್ಲಿ ಬಳಸಬಹುದು. ಅವುಗಳಲ್ಲಿ ಒಂದು ಪೇರಳೆ ಎಲೆ ಟೋನರ್. ಹಾಗಾದ್ರೆ ಪೇರಳೆ ಎಲೆ ಟೋನರ್ ಅನ್ನು ಮುಖಕ್ಕೆ ಹಚ್ಚುವುದರಿಂದಾಗುವ ಪ್ರಯೋಜನಗಳೇನು? ಮತ್ತು ಅದನ್ನು ಹೇಗೆ ತಯಾರಿಸುವುದು? ಎಂಬುದನ್ನು ತಿಳಿದುಕೊಳ್ಳಿ.
ಪೇರಳೆ ಎಲೆ ಟೋನರ್ ಅನ್ನು ಮುಖಕ್ಕೆ ಹಚ್ಚುವುದರಿಂದಾಗುವ ಪ್ರಯೋಜನಗಳು
ಕಲೆಗಳನ್ನು ಕಡಿಮೆ ಮಾಡುತ್ತದೆ
ಪೇರಳೆ ಎಲೆಗಳು ಉರಿಯೂತ ನಿವಾರಕ ಮತ್ತು ಸೂಕ್ಷ್ಮಜೀವಿ ನಿವಾರಕ ಗುಣಗಳನ್ನು ಹೊಂದಿವೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಕೂಡ ಇದೆ. ಹಾಗಾಗಿ ಪೇರಳೆ ಎಲೆ ಟೋನರ್ ಅನ್ನು ಮುಖಕ್ಕೆ ಬಳಸುವುದರಿಂದ ಮೊಡವೆಗಳ ಸಮಸ್ಯೆ ನಿವಾರಣೆಯಾಗುತ್ತದೆ. ಮತ್ತು ಕಲೆಗಳು ಮೂಡುವುದು ಕಡಿಮೆಯಾಗಿ ಕ್ಲಿಯರ್ ತ್ವಚೆ ನಿಮ್ಮದಾಗುತ್ತದೆ.
ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ
ಪೇರಳೆ ಎಲೆಗಳು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಇದರ ಟೋನರ್ ಚರ್ಮವನ್ನು ಆಳವಾದ ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಮತ್ತು ಕಲೆಗಳನ್ನು ಕಡಿಮೆ ಮಾಡುತ್ತದೆ ಇದರಿಂದ ಚರ್ಮ ಒಳಗಿನಿಂದ ಸ್ವಚ್ಛಗೊಂಡು ಅದು ನೈಸರ್ಗಿಕವಾಗಿ ಹೊಳೆಯುವಂತೆ ಮಾಡುತ್ತದೆ.
ಚರ್ಮವನ್ನು ಬಿಗಿಗೊಳಿಸುತ್ತದೆ
ಪೇರಳೆ ಎಲೆಗಳಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳ ಗುಣಲಕ್ಷಣಗಳು ಚರ್ಮಕ್ಕೆ ಪ್ರಯೋಜನಕಾರಿ. ಅವುಗಳ ಟೋನರ್ ಬಳಸುವುದರಿಂದ ಚರ್ಮವನ್ನು ಫ್ರೀ ರಾಡಿಕಲ್‌ಗಳಿಂದ ರಕ್ಷಿಸಲು, ಚರ್ಮವನ್ನು ನೈಸರ್ಗಿಕವಾಗಿ ಬಿಗಿಗೊಳಿಸಲು ಮತ್ತು ನೈಸರ್ಗಿಕವಾಗಿ ಯೌವನಯುತವಾಗಿಡಲು ಸಹಾಯ ಮಾಡುತ್ತದೆ.
ಪೇರಳೆ ಎಲೆ ಟೋನರ್ ತಯಾರಿಸುವ ವಿಧಾನ
ಪೇರಳೆ ಎಲೆಯ ಚರ್ಮದ ಟೋನರ್ ತಯಾರಿಸಲು,ಒಂದು ಹಿಡಿ ತಾಜಾ ಪೇರಳೆ ಎಲೆಗಳನ್ನು ಸುಮಾರು 10 ನಿಮಿಷಗಳ ಕಾಲ ನೀರಿನಲ್ಲಿ ಕುದಿಸಿ, ಮಿಶ್ರಣವನ್ನು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ. ನಂತರ ಅದನ್ನು ಸೋಸಿ ಸ್ವಚ್ಛವಾದ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ. ಈ ನೈಸರ್ಗಿಕ ಟೋನರ್ ಅನ್ನು ರಂಧ್ರಗಳನ್ನು ಬಿಗಿಗೊಳಿಸಲು, ಚರ್ಮವನ್ನು ರಿಫ್ರೆಶ್ ಮಾಡಲು ಮತ್ತು ಮೊಡವೆಗಳ ವಿರುದ್ಧ ಹೋರಾಡಲು ಬಳಸಬಹುದು. ಅಲ್ಲದೇ ಇದನ್ನು ವಿಶೇಷವಾಗಿ ಎಣ್ಣೆಯುಕ್ತ ಅಥವಾ ಮೊಡವೆ ಪೀಡಿತ ಚರ್ಮಕ್ಕೆ ಬಳಸಬಹುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
