CHITRADURGA NEWS | 27 MARCH 2026
ಚಿತ್ರದುರ್ಗ: ಮುಂಬರುವ ದಿನಗಳಲ್ಲಿ ನ್ಯಾನೋ ಪ್ಲಾಸ್ಟಿಕ್ ಮತ್ತು ಮಾದಕ ದ್ರವ್ಯಗಳು ಜನರನ್ನು ಅನಾರೋಗ್ಯದ ಕಡೆಗೆ ಒಯ್ಯುತ್ತವೆ ಎಂದು ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ.ಯುವರಾಜ್ ಬಿ.ವೈ. ಎಚ್ಚರಿಸಿದರು.
ಇದನ್ನೂ ಓದಿ: ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ನಗರದ ಎಸ್.ಜೆ.ಎಂ. ಔಷಧ ಮಹಾವಿದ್ಯಾಲಯದಲ್ಲಿ ನಡೆದ ಐ-ಕ್ಲಾಪ್ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಏಕಾಂತದಲ್ಲಿ ಸಮಯ ಕಳೆಯುವುದು ಹಾಗೂ ಹೆಚ್ಚು ಮೊಬೈಲ್ ಬಳಕೆ ಮಾಡುವುದನ್ನು ಬಿಟ್ಟು ಯುವಕರು ಕ್ರೀಡೆ ಹಾಗೂ ಸಮಾಜದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಹಿರಿಯರು ಅಡುಗೆ ಮನೆಯನ್ನೆ ಔಷಧಾಲಯವನ್ನಾಗಿ ಮಾಡಿಕೊಂಡಿದ್ದರು. ಯಾವುದೇ ತೊಂದರೆಗೆ ಮನೆಮದ್ದನ್ನೇ ಅವಲಂಬಿಸಿದ್ದರು.
ಮುರುಘಾ ಪರಂಪರೆಯ ಸ್ವಾಮಿಗಳು ಮೈಸೂರು ರಾಣಿಗೆ ಅನಾರೋಗ್ಯದ ಸ್ಥಿತಿಯಲ್ಲಿ ಯಾರು ಗುಣಪಡಿಸದ ಕಾಯಿಲೆಯನ್ನು ಔಷಧೋಪಚಾರ ಮಾಡಿ ನಿವಾರಿಸಿ. ಕೊಡಗಿನಲ್ಲಿ ಕಾಫಿತೋಟವನ್ನು ಮೈಸೂರು ಮಹಾರಾಜರಿಂದ ಬಳುವಳಿಯಾಗಿ ಪಡೆದ ಕಟ್ಟಿಗೆಹಳ್ಳಿ ಸ್ವಾಮಿಗಳನ್ನು ಸ್ಮರಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಮಾತನಾಡಿ, ಹಿಂದಿನ ಕಾಲದಲ್ಲಿ ಔಷಧೀಯ ಸಂಶೋಧನೆಗೆ ವರ್ಷಗಳೇ ಕಳೆಯುತ್ತಿದ್ದವು. ಈಗ ಎಐ ತಂತ್ರಜ್ಞಾನ ಬಂದಿದೆ. ಕೆಲವೇ ದಿನಗಳಲ್ಲಿ ಔಷಧಿಯನ್ನು ಕಂಡುಹಿಡಿಯಲಾಗುತ್ತಿದೆ. ಇಂತಹ ಹೊಸ ವಿಚಾರಗಳ ವಿನಿಮಯ ಸಂಕಿರಣದಲ್ಲಿ ವಿದ್ಯಾರ್ಥಿಗಳಿಗೆ ಆಗಲಿದೆ. ಅದರ ಉಪಯೋಗ ಪಡೆದುಕೊಳ್ಳದಿದ್ದರೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕಷ್ಟ ಇದೆ. ಔಷಧೀಯ ಬಳಕೆ ವ್ಯಕ್ತಿಯಿಂದ ವ್ಯಕ್ತಿಗೆ ಪ್ರಮಾಣ ಹೆಚ್ಚು ಕಡಿಮೆ ಇರುತ್ತದೆ ಮತ್ತು ಆಗುತ್ತದೆ ಅದರ ಅರಿವು ಜಾಗೃತಿ ಮೂಡಿಸುವುದು ಮುಖ್ಯ ಎಂದು ತಿಳಿಸಿದರು.
ಸಹಾಯಕ ಔಷಧ ನಿಯಂತ್ರಕ ಗಿರೀಶ್ ಸಿ.ಎಚ್. ಮಾತನಾಡಿ, ಔಷಧ ತಂತ್ರಜ್ಞಾನ ಮತ್ತು ತಯಾರಿಕೆ ಅತ್ಯವಶ್ಯಕ ಮತ್ತು ಅತಿ ವೇಗದಲ್ಲಿ ಬೆಳೆಯುತ್ತಿರುವ ಕ್ಷೇತ್ರವಾಗಿದೆ. ವಿಶ್ವಕ್ಕೆ ಬೇಕಾಗುವ ಔಷಧಿಗಳನ್ನು ಭಾರತವು ತಯಾರು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಸಚಿವ ಡಾ.ಗಣಾಚಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಮುಗಿಸಿದ ನಂತರ ಮುಂದೇನು ಎಂಬ ಚಿಂತೆ ಕಾಡುತ್ತದೆ. ಅದಕ್ಕಾಗಿ ಅವರು ಕೌಶಲ್ಯವನ್ನು ತಂತ್ರಜ್ಞಾನದೊಂದಿಗೆ ಹೊಂದಿಸಿಕೊಂಡು ಮಾರುಕಟ್ಟೆಯ ಅನುಗುಣವಾಗಿ ತಮ್ಮ ಬಯೋಡೇಟಾವನ್ನು ವಿಭಿನ್ನ ರೀತಿಯಲ್ಲಿ ಗುರುತಿಸುವಂತೆ ಮಾಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಇದನ್ನೂ ಓದಿ: ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ | ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ಡಾ.ಯೋಗೇಂದ್ರ ಮಾತನಾಡಿದರು. ಸಮ್ಮೇಳನದಲ್ಲಿ ರಾಜ್ಯ ಹಾಗೂ ಹೊರರಾಜ್ಯದ 450ಕ್ಕೂ ಹೆಚ್ಚು ಔಷಧಿ ತಜ್ಞರು ಭಾಗವಹಿಸಿದ್ದರು. ಪ್ರಾಚಾರ್ಯ ಡಾ.ಟಿ.ಎಸ್.ನಾಗರಾಜ್, ಪೂಜಾ ಬಿ.ಸಿ., ಡಾ.ಯಶೋಧ, ಡಾ.ಸ್ನೇಹಲತಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
