
CHITRADURGA NEWS | 12 SEPTEMBER 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ.ಕಾರಜೋಳ ಅವರು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಸೆಪ್ಟಂಬರ್ 15 ರಂದು ಉಪನ್ಯಾಸ ನೀಡಲಿದ್ದಾರೆ.
ದಲಿತಗುರು ದಿವಂಗತ ಶ್ರೀ ತಲಕಾಡು ರಂಗೇಗೌಡ ಸ್ಮಾರಕ ದತ್ತಿ ಉಪನ್ಯಾಸ (Datti upnyasa) ಕಾರ್ಯಕ್ರಮದಲ್ಲಿ ಪದ್ಮಶ್ರೀ ಕಾಕಾ ಕಾರ್ಖಾನೀಸ: ಜೀವನ – ದೃಷ್ಟಿ ಕುರಿತಂತೆ ಸಂಸದರಾದ ಗೋವಿಂದ ಕಾರಜೋಳ ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕಿಗೆ ಇಂದು ಚುನಾವಣೆ | ಸಂಜೆ ವೇಳೆಗೆ ಗೊತ್ತಾಗಲಿದೆ ರಿಸಲ್ಟ್
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಥಿಕ್ ಸೊಸೈಟಿ ಅಧ್ಯಕ್ಷರಾದ ವಿ.ನಾಗರಾಜ್ ವಹಿಸಿಕೊಳ್ಳಲಿದ್ದಾರೆ.
ಸೆಪ್ಟಂಬರ್ 15 ಭಾನುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿಯ 2ನೇ ಮಹಡಿಯಲ್ಲಿರುವ ಶತಮಾನೋತ್ಸವ ಸಭಾಂಗಣದಲ್ಲಿ ಈ ವಿಶೇಷ ದತ್ತಿ ಉಪನ್ಯಾಸ ನಡೆಯಲಿದ್ದು, ಆಸಕ್ತರಿಗೆ ಆಹ್ವಾನವಿದೆ ಎಂದು ಸೊಸೈಟಿಯ ಗೌರವ ಕಾರ್ಯದರ್ಶಿ ಎನ್.ರವಿ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
