
CHITRADURGA NEWS | 04 NOVEMBER 2025
ಚಿತ್ರದುರ್ಗ: ನಗರದ ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಐಎಸ್‌ಟಿಇ, ಐಕ್ಯುಎಸಿ ಸಹಯೋಗದೊಂದಿಗೆ ಸೆನ್ಸಾರ್ ಟೆಕ್ನಾಲಜಿ ಮತ್ತು ಸ್ಮಾರ್ಟ್ ಸೆನ್ಸಾರ್ ವಿಚಾರ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಕೇರಳದ ಕಣ್ಣೂರಿನಲ್ಲಿ ಚಿತ್ರದುರ್ಗದ ಮೆಡಿಕಲ್ ವಿದ್ಯಾರ್ಥಿ ಸಾವು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಾವಣಗೆರೆ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಇ ಮತ್ತು ಐಟಿ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಎಸ್ ಹೊಳಿ ಉಪನ್ಯಾಸ ನೀಡಿ ಮಾತನಾಡಿ, ಸೆನ್ಸಾರ್ ತಂತ್ರಜ್ಞಾನ ಅಟೋಮೊಬೈಲ್, ವೈದ್ಯಕೀಯ, ಕೈಗಾರಿಕೆ, ಮೊಬೈಲ್ ಕ್ಷೇತ್ರ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಬಳಕೆಯಲ್ಲಿದೆ.
ಸ್ಮಾರ್ಟ್ ಸೆನ್ಸಾರ್‌ಗಳು ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸುತ್ತವೆ. ಈ ಸೆನ್ಸಾರ್‌ಗಳನ್ನು ಹೆಚ್ಚಾಗಿ ಗೃಹ ಭದ್ರತೆ ವ್ಯವಸ್ಥೆ, ಕೃಷಿ ಕ್ಷೇತ್ರದಲ್ಲಿ ತಾಪಮಾನ, ಮಣ್ಣಿನ ತೇವಾಂಶ ಪತ್ತೆ ಹಚ್ಚಲು, ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಮೇಲ್ವಿಚಾರಣೆ ಮಾಡಲು ಬಳಸಲಾಗುತ್ತಿದೆ.
ಸೆನ್ಸಾರ್ ತಂತ್ರಜ್ಞಾನದ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಂಡಲ್ಲಿ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಲ್ಲಭಬಾಯಿ ಪಟೇಲ್‍ರವರ 150 ನೇ ಜನ್ಮದಿನಾಚರಣೆ | ನ.12 ರಂದು ಏಕತಾ ನಡಿಗೆ ಅಂದೋಲನ
ಕಾರ್ಯಕ್ರಮದಲ್ಲಿ ಎಲೆಕ್ಟಿಕಲ್ ಮತ್ತು ಎಲೆಕ್ಟಾನಿಕ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಹಾಗೂ ಪ್ರಭಾರಿ ಪ್ರಾಂಶುಪಾಲರಾದ ಡಾ.ಕುಮಾರಸ್ವಾಮಿ ಬಿ ಜಿ, ಎಲೆಕ್ಟಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಿದ್ಧೇಶ್ ಕೆ ಬಿ, ಡೀನ್ ಅಕಾಡೆಮಿಕ್ ಡಾ.ಚೇತನ್ ಎಸ್, ಕಾರ್ಯಕ್ರಮ ಸಂಚಾಲಕರುಗಳಾದ ಪ್ರೊ.ರೂಪ ಎಸ್, ಪ್ರೊ.ಆರ್.ಸುಷ್ಮಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
