CHITRADURGA NEWS | 03 JULY 2025
ಹಿರಿಯೂರು: ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಸುಧಾರಣೆ ತರುವುದಕ್ಕಾಗಿ ಎಲ್ಲಾ ಉಪನ್ಯಾಸಕರು ಚಿಂತನ -ಮಂಥನ ನಡೆಸಬೇಕಿದೆ ಎಂದು ಶಾಲಾ ಶಿಕ್ಷಣ (ಪದವಿಪೂರ್ವ) ಉಪ ನಿರ್ದೇಶಕ ಕೆ.ತಿಮ್ಮಯ್ಯ ಉಪನ್ಯಾಸಕರುಗಳಿಗೆ ಸಲಹೆ ನೀಡಿದರು.

Also Read: ನ್ಯಾಯಾಲಯಕ್ಕೆ ಹಾಜರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು
ಹಿರಿಯೂರಿನ ವಾಗ್ದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹೆಚ್ಚಿನ ಪ್ರಮಾಣದಲ್ಲಿ ಫಲಿತಾಂಶ ತರಬೇಕಿದೆ. ಇಲ್ಲಿ ಸೇರಿರುವ ಎಲ್ಲಾ ಹಿರಿಯ ಮತ್ತು ಕಿರಿಯ ಉಪನ್ಯಾಸಕರು ತಮ್ಮ ಪಾಠ ಪ್ರವಚನದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಅದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.
ತಮ್ಮ ಅಧ್ಯಯನ ಮತ್ತು ಅನುಭವದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಮಾತನಾಡಿ, ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರು, ಪ್ರಾಚಾರ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಪಾತ್ರ ಮುಖ್ಯವಾದದ್ದು, ಎಲ್ಲರೂ ಸೇರಿ ಚಿಂತನ ಮಂಥನ ನಡೆಸಿ ಸುಧಾರಣೆಗೆ ತರಬೇಕಿದೆ ಎಂದು ಹೇಳಿದರು.
Also Read: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಲು ಪ್ರಧಾನಿಗೆ ಪತ್ರ
ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಲ್ಲೇಶ್ ಮಾತನಾಡಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ವಾಗ್ದೇವಿ ವಿದ್ಯಾ ಸಂಸ್ಥೆಯ ಕೆ.ವಿ.ಅಮರೇಶ್ ವೇದಿಕೆಯಲ್ಲಿದ್ದರು. ಕಾಂತರಾಜ್ ಸ್ವಾಗತಿಸಿದರು. ಜೆ.ಲೋಕೇಶ್ ನಿರೂಪಿಸಿದರು, ಡಾ.ಮಾರುತಿ ವಂದಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
