By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
    55 minutes ago
    ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
    ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
    1 hour ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
    2 hours ago
    ಅರ್ಜಿ ಅಹ್ವಾನ
    ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ 
    13 hours ago
    ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ನಡೆದ ಗುರು ಪೂರ್ಣಿಮೆಯಲ್ಲಿ ಎಂ.ಸಿ.ರಘುಚಂದನ್ ಮಾತನಾಡಿದರು
    ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    3 days ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    7 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    13 hours ago
    creams
    ರಾತ್ರಿಯಲ್ಲಿ ಯಾವ ಕ್ರೀಮ್‌ಗಳನ್ನು ಹಚ್ಚಬೇಕು ಮತ್ತು ಹಗಲಿನಲ್ಲಿ ಯಾವುದನ್ನು ಹಚ್ಚಬೇಕು ಎಂಬುದನ್ನು ತಿಳಿಯಿರಿ
    14 hours ago
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    2 days ago
    darken your hair naturally
    ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
    2 days ago
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    3 days ago
Reading: ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್

News Desk Chitradurga News
Last updated: 30 July 2026 20:18
News Desk Chitradurga News
1 hour ago
Share
ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
SHARE

CHITRADURGA NEWS | 30 JULY 2026

ಚಿತ್ರದುರ್ಗ: ಆಧುನಿಕ ಸಮಾಜದಲ್ಲಿ ದೇಶವು ಎಷ್ಟೇ ಪ್ರಗತಿ ಸಾಧಿಸಿದರೂ, ಸಮಾಜ ಎಷ್ಟೇ ಮುಂದುವರಿದರೂ ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾನವ ಕಳ್ಳಸಾಕಾಣಿಕೆಯಂತಹ ಕಪ್ಪು ಛಾಯೆ ನಮ್ಮನ್ನು ಕಾಡುತ್ತಲೇ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಡಿ.ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆಗಳ ಕುರಿತು ಬುದ್ಧಿಜೀವಿಗಳು, ವಿದ್ಯಾವಂತರು ಹಾಗೂ ಸಮಾಜದ ಉನ್ನತ ಮಟ್ಟದ ವ್ಯಕ್ತಿಗಳು ಚಿಂತನೆ ನಡೆಸಬೇಕಾದ ಅಗತ್ಯವಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಕಟಕ್ಕೂ ಸ್ಪಂದಿಸುವ ಕೆಲಸವಾಗಬೇಕು ಎಂದರು.

ಇ0ದಿನ ದಿನಗಳಲ್ಲಿ ಯುವಕರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಇಂತಹ ಅಪರಾಧಗಳನ್ನು ಹೇಗೆ ಪತ್ತೆ ಹಚ್ಚಬೇಕು, ಇದರಿಂದ ರಕ್ಷಣೆ ಪಡೆಯುವುದು ಹೇಗೆ ಹಾಗೂ ಕಾನೂನಾತ್ಮಕ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ವ್ಯಾಪಕ ಚಿಂತನೆ-ಮಂಥನ ನಡೆಯಬೇಕಿದೆ ಎಂದರು.

ಇದನ್ನೂ ಓದಿ: ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸುವ ಮೂಲಕ ಈ ಕಾರ್ಯಕ್ರಮದ ಉದ್ದೇಶವನ್ನು ಯಶಸ್ವಿಗೊಳಿಸಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯದ ವ್ಯಾಪ್ತಿಯಲ್ಲಿ ಇಂತಹ ಶೋಷಣೆಗಳ ವಿರುದ್ಧ ಜಾಗೃತಿ ಮೂಡಿಸಲು ಶ್ರಮಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಧೀನ್ ಕುಮಾರ್ ಮಾತನಾಡಿ, ಸಾಮಾನ್ಯವಾಗಿ ಆಚರಿಸುವ ಹಬ್ಬ-ಹರಿ ದಿನಗಳು, ಉತ್ಸವಗಳಂತೆ ಮಾನವ ಕಳ್ಳಸಾಕಾಣಿಕೆ ತಡೆ ದಿನಾಚರಣೆಯು ಸಂಭ್ರಮದ ಕಾರ್ಯಕ್ರಮವಲ್ಲ. ಮಹತ್ವದ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತಿದ್ದು, ಈ ಸಾಮಾಜಿಕ ಪಿಡುಗನ್ನು ತಡೆಯಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದರು.

ನಮ್ಮ ಮನೆಯ ಹೆಣ್ಣುಮಗಳು ಸ್ವಲ್ಪ ಸಮಯ ತಡವಾಗಿ ಮನೆಗೆ ಬಂದಾಗ, ಇಲ್ಲವೇ ಫೋನ್ ಸಂಪರ್ಕಕ್ಕೆ ಸಿಗದೇ ಇದ್ದಾಗ ಉಂಟಾಗುವ ಆತಂಕ ಮತ್ತು ನೋವು ಎಂಥದ್ದು ಎಂಬುದು ಅನುಭವಿಸಿದವರಿಗಷ್ಟೇ ಗೊತ್ತು. ಪೊಲೀಸ್ ಅಧಿಕಾರಿಯೇ ಆಗಿದ್ದರೂ, ಅಂತಹ ಸಂದರ್ಭದಲ್ಲಿ ಅವರು ಕೇವಲ ಒಬ್ಬ ತಂದೆಯಾಗಿ, ಕುಟುಂಬದ ಸದಸ್ಯರಾಗಿ ಆ ನೋವನ್ನು ಅನುಭವಿಸುತ್ತಾರೆ. 

ಇದನ್ನೂ ಓದಿ: ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್

ನಮ್ಮ ಸ್ವಂತ ಕುಟುಂಬದ ಸದಸ್ಯರೇ ಕಳೆದುಹೋದರೆ ಹೇಗಿರಬಹುದು ಎಂದು ಒಂದು ಕ್ಷಣ ಯೋಚಿಸಿದರೆ ಎದೆ ಜಲ್ಲೆನಿಸುತ್ತದೆ. ಹೀಗಿರುವಾಗ, ಮಾನವ ಕಳ್ಳಸಾಕಾಣಿಕೆಗೆ ಒಳಗಾಗುವ ಬಾಧಿತರ ಸ್ಥಿತಿ ಮತ್ತು ಅವರ ಕುಟುಂಬದ ನೋವು ಎಷ್ಟಿರಬೇಡ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಮಕ್ಕಳು ಎಂದರೆ ದೇವರಿಗೆ ಸಮಾನ, ಸ್ತ್ರೀಯರು ದೇವತೆಗಳು ಎಂದು ಬರೀ ಮಾತಿನಲ್ಲಿ ಹೇಳಿ ಸುಮ್ಮನಾದರೆ ಸಾಲದು. ಕೇವಲ ಕಾನೂನು, ಆದೇಶಗಳಿಂದ ಮಾತ್ರವೇ ಈ ಸಮಸ್ಯೆ ತಡೆಯಲು ಸಾಧ್ಯವಿಲ್ಲ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಸ್ವೀಕರಿಸಬೇಕು. ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆಯ ವಿಷಯ ಬಂದಾಗ ಅತ್ಯಂತ ಜಾಗರೂಕರಾಗಿ, ವೈಯಕ್ತಿಕ ಕಾಳಜಿಯಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಕಿವಿಮಾತು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಸಮಾಜದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಮಾನವ ಕಳ್ಳ ಸಾಗಾಣಿಕೆ ತಡೆಯುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ರುಡ್ ಸೆಟ್ ಸಂಸ್ಥೆಯಲ್ಲಿ ಸಮಗ್ರ ಕೃಷಿ ತರಬೇತಿ

ಇಂದಿನ ದಿನಗಳಲ್ಲಿ ಮಹಿಳೆಯರು ಹಾಗೂ ಉದ್ಯೋಗ ಹುಡುಕುವ ಶ್ರಮಿಕರನ್ನು ಗುರಿಯಾಗಿಸಿಕೊಂಡು ಶೋಷಣೆ ಮಾಡಲಾಗುತ್ತಿದೆ. ಏಜೆಂಟ್‌ಗಳ ಮೂಲಕ ವಿದೇಶಗಳಲ್ಲಿ ಅಥವಾ ಹೊರರಾಜ್ಯಗಳಲ್ಲಿ ಹೆಚ್ಚಿನ ಸಂಬಳ ಹಾಗೂ ಉತ್ತಮ ಸೌಲಭ್ಯ ನೀಡುವುದಾಗಿ ಆಮಿಷ ಒಡ್ಡಿ ವಂಚಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಶಿಕ್ಷಣ, ಪ್ರಾಣ ರಕ್ಷಣೆ ಹಾಗೂ ಸ್ವತಂತ್ರವಾಗಿ ಜೀವಿಸುವ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಶ್ರಮಿಸಿದರೆ ಮಾತ್ರ ಮಾನವ ಕಳ್ಳಸಾಗಾಣಿಕೆಯಂತಹ ಪಿಡುಗನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುನೀಲ್ ಕುಮಾರ್ ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ ವಿಷಯದ ಕುರಿತು ಹಿರಿಯ ವಕೀಲ ಕೆ.ಎಸ್.ವಿಜಯ್ ಉಪನ್ಯಾಸ ನೀಡಿದರು.

ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷಮ್ಮ, ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AwarenessChitradurgaChitradurga newsHuman TraffickingJustice G.D. Mahavarkarಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗೃತಿನ್ಯಾ.ಜಿ.ಡಿ.ಮಹಾವರ್ಕರ್ಮಾನವ ಕಳ್ಳಸಾಕಾಣಿಕೆ
Share This Article
Facebook Email Print
Previous Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
Next Article ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
Leave a Comment

Leave a Reply Cancel reply

Your email address will not be published. Required fields are marked *

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up