
CHITRADURGA NEWS | 17 AUGUST 2025
ಹೊಳಲ್ಕೆರೆ: ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಎರಡು ಚಿರತೆ ಮರಿಗಳು ಚಂಗನೆ ಹಾರಿ ಗೊಬ್ಬರ ಹಾಕುತ್ತಿದ್ದ ಮಹಿಳೆ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿ ಗ್ರಾಮದ ತನುಜಾ(25) ಅವರ ಮೇಲೆ ಚಿರತೆ ದಾಳಿ ನಡೆದಿದ್ದು, ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಕೋಟೆ ಪೊಲೀಸ್ ಠಾಣೆಯ ಜಪ್ತಿ ವಾಹನಗಳ ಹರಾಜು ಆಗಸ್ಟ್ 23ಕ್ಕೆ
ತನ್ನ ಎರಡು ಮರಿಗಳೊಂದಿಗೆ ಮೆಕ್ಕೆಜೋಳದ ಹೊಲದಲ್ಲಿದ್ದ ಚಿರತೆ, ಗೊಬ್ಬರ ಹಾಕುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದೆ.
ಗಾಯಾಳು ತನುಜಾ, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಿರತೆ ಹಿಡಿದು ಸ್ಥಳಾಂತರ ಮಾಡಲು ಒತ್ತಾಯಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
