
CHITRADURGA NEWS | 14 JANUARY 2026
ಚಿತ್ರದುರ್ಗ: ಡಿ.ಕೆ.ಶಿವಕುಮಾರ್ ಬೇಕಿದ್ದರೆ ಶಿಕಾರಿಪುರದಲ್ಲೇ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿಕಾರಿಪುರದಲ್ಲಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮಾಡುತ್ತಾರಂತೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಯಿಸಿದ ಅವರು, ಪಾದಯಾತ್ರೆ ಮಾಡುವುದು ಬೇಡ ಅವರೇ ಬಂದು ಸ್ಪರ್ಧೆ ಮಾಡಲಿ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 14 | ಮೆಕ್ಕೆಜೋಳ, ಶೇಂಗಾ, ಕಡಲೆ ರೇಟ್ ಎಷ್ಟಿದೆ?
ಇನ್ನೂ ಬಳ್ಳಾರಿ ಪಾದಯಾತ್ರೆ ಕುರಿತು ಮಾತನಾಡಿದ ಅವರು, ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಾತ್ರ ಅಲ್ಲ, ರಾಜ್ಯದ ಎಲ್ಲ ಪ್ರಮುಖರು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಪಾದಯಾತ್ರೆ ಮಾಡುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೂ ವರಿಷ್ಠರ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇವೆ. ದೆಹಲಿ ನಾಯಕರ ಜೊತೆ ಮಾತನಾಡಿದ್ದು ಒಂದೆರಡು ದಿನಗಳಲ್ಲಿ ಸಂದೇಶ ಬರಲಿದೆ ಎಂದರು.
ಇದಕ್ಕೂ ಮುನ್ನಾ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನವರಿ 17 ರಂದು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯ ಸರ್ಕಾರದ ವೈಫಲ್ಯ, ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಪ್ರತಿಭಟಿಸುತ್ತೇವೆ ಎಂದರು.
ಮೋದಿ ಕೈ ಬಲಪಡಿಸಲು HDD, HDK ಬೆಂಬಲ:
ರಾಜ್ಯದಲ್ಲಿ ಮೈತ್ರಿ ವಿಚಾರವಾಗಿ ಜೆಡಿಎಸ್ ಬಿಜೆಪಿ ನಡುವೆ ಗೊಂದಲ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕುಮಾರಣ್ಣ ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 13 ಜನವರಿ | ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರ್ಕೇಟ್ ರೇಟ್
ಮೈತ್ರಿ ವಿಚಾರ ಎರಡು ಪಕ್ಷದ ನಾಯಕರ ಜೊತೆ ಚರ್ಚಿಸಿ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ನರೇಗಾದಲ್ಲಿ ವ್ಯಾಪಕ ಭ್ರಷ್ಟಾಚಾರ:
ದೆಶದ ಹಿತದೃಷ್ಠಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹಕವು ಬದಲಾವಣೆ ಮಾಡುತ್ತಿದ್ದಾರೆ. ಗಾಂಧೀಜಿ ಕನಸು ನನಸು ಮಾಡುವ ನಿಟ್ಟಿನಲ್ಲಿ ಹೆಸರು ಬದಲಾಗಿದೆ ಎಂದರು.
2006 ರಲ್ಲಿ ಮನರೇಗಾ ಆರಂಭವಾಗಿದ್ದು, ಯೋಜನೆ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ, ಹಗರಣ ನಡೆಯುತ್ತಿತ್ತು. ಈ ಯೋಜನೆಯಲ್ಲಿ ಲೂಟಿ ಮಾಡುವುದು ಇತಿಶ್ರೀ ಹಾಡಲು ಮಾಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಆಗಬೇಕು ಎಂದು ಹೊಸ ಚಿಂತನೆ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ, ರಾಹುಲ್ ಗಾಂಧಿ ಇದನ್ನೇ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಜನರಲ್ಲಿ ವಿಶ್ವಾಸ ಕಳೆದುಕೊಂಡಿದೆ.
ಇದನ್ನೂ ಓದಿ: ಗಣಿತ ಗಣಕ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ ಒನ್
ಗಾಂಧೀಜಿಯನ್ನು ಬಿಜೆಪಿ ಎರಡನೇ ಬಾರಿ ಕೊಲೆ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಾವು ಜಾಗೃತಿ ಮೂಡಿಸುತ್ತೇವೆ ಎಂದರು.
ರಾಹುಲ್ ಗಾಂಧಿ ಜೊತೆ ಡಿಕೆಶಿ – ಸಿದ್ದು ಪ್ರತ್ಯೇಕ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಕಾಂಗ್ರೆಸ್ ಪಕ್ಷದಲ್ಲಿ ಆತಂರಿಕ ಕಚ್ಚಾಟ ನಡೆಯುತ್ತಿದೆ. ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ತಾಳ್ಮೆ ಕೆಣಕಬೇಡಿ ಅಂತ ಸಿಎಂ ಆಗಲು ಇನ್ನೋಬ್ಬರು ರೆಡಿ ಆಗಿದ್ದಾರೆ. ಆದರೆ, ರಾಜ್ಯದ ಜನ ಈ ಕಚ್ಚಾಟದಲ್ಲಿ ಸಮಸ್ಯೆಗೆ ಸಿಲುಕಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಭ್ರಷ್ಟಾಚಾರ ತುಂಬಿದೆ. ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
