CHITRADURGA NEWS | 15 AUGUST 2026
ಹೊಳಲ್ಕೆರೆ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹಿರಿಯರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗಬೇಕು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.
ಇದನ್ನೂ ಓದಿ: ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು,
ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ವಿಶ್ವದಲ್ಲೇ ಶಕ್ತಿಶಾಲಿ ರಾಷ್ಟ್ರವಾಗಬೇಕು ಎಂಬುದು ಸ್ವಾತಂತ್ರ್ಯ ಹೋರಾಟಗಾರರ ಕನಸಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತಾ ಪ್ರಮಾಣ ಕಡಿಮೆ ಇತ್ತು. ಸ್ವಾತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಪ್ರಗತಿಯಾಗಿದ್ದು, ದೇಶ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದ ಸಾಮಾನ್ಯ ವ್ಯಕ್ತಿಯಾಗಿದ್ದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿರುವುದು ಭಾರತದ ಪ್ರಗತಿಗೆ ಸಾಕ್ಷಿಯಾಗಿದ್ದು, ಇಂದು ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ತುರವನೂರಿನಲ್ಲಿ ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ಉದ್ಯಾನವ ನಿರ್ಮಾಣ | ಟಿ.ರಘುಮೂರ್ತಿ
1994ರಲ್ಲಿ ಪ್ರಥಮ ಬಾರಿಗೆ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ ಸಾರ್ವಜನಿಕರ ಮಧ್ಯೆಯಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಶಾಲಾ-ಕಾಲೇಜುಗಳು, ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಇಂದಿರಾಗಾಂಧಿ ವಸತಿ ಶಾಲೆ, ಕಸ್ತೂರಬಾ ಶಾಲೆ, ಐಟಿಐ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಆರಂಭಿಸಲಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.
ತಾಲ್ಲೂಕಿನಾದ್ಯಂತ 13 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿ, ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತ ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧೀಜಿ, ಸುಭಾಷ್‌ಚಂದ್ರ ಬೋಸ್ ಹಾಗೂ ಜವಾಹರಲಾಲ್ ನೆಹರು ಅವರ ಕನಸುಗಳನ್ನು ಸಾಕಾರಗೊಳಿಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಮೂವರು ವಿದ್ಯಾರ್ಥಿಗಳಿಗೆ ತಲಾ ₹1 ಲಕ್ಷ ಬಹುಮಾನ
ಹತ್ತನೇ ತರಗತಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕಗಳನ್ನು ಗಳಿಸಿದ ಹೊಳಲ್ಕೆರೆ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಅವರು ತಲಾ ₹1 ಲಕ್ಷ ಬಹುಮಾನ ನೀಡಿ ಅಭಿನಂದಿಸಿದರು.
ಇದನ್ನೂ ಓದಿ: ಅವಿಭಕ್ತ ಕುಟುಂಬದ ಕೊಂಡಿ ಕಳಚುತ್ತಿದ್ದು, ಕುಟುಂಬಗಳಲ್ಲಿ ಸಾಮರಸ್ಯ ಕಡಿಮೆ | ಡಾ.ಬಸವಕುಮಾರ ಶ್ರೀ
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೊರಲಗುಂದಿ ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಫಿರೋಜ್‌ಖಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಶಪ್ಪ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

