CHITRADURGA NEWS | 02 MARCH 2024
ಚಿತ್ರದುರ್ಗ: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ನೂತನ ಅಧ್ಯಕ್ಷರಾಗಿ ಎಂ.ಕೆ.ತಾಜ್‌ಪೀರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಕ್ಷಣಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಾಕ್ಷಿಯಾದರು.
ಬಳಿಕ ಮಾತನಾಡಿದ ತಾಜ್‌ಪೀರ್, ರಾಜ್ಯದಲ್ಲಿ ಪಕ್ಷ ಅಧಿಕಾರ ಹಿಡಿದರೆ ಕಾರ್ಯಕರ್ತರಿಗೆ ಅವಕಾಶ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಪಕ್ಷದ ಕಾರ್ಯಕರ್ತನಾಗಿದ್ದ ನನಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ. ಇದು ನನಗೆ ಬಯಸದೇ ಬಂದ ಭಾಗ್ಯವಾಗಿದೆ ಎಂದು ಭಾವುಕರಾದರು.
ಕ್ಲಿಕ್ ಮಾಡಿ ಓದಿ: https://chitradurganews.com/mla-k-c-virendra-pappi-who-had-written-a-letter-and-pressured-chitradurga-office-not-to-move/
ಚಿತ್ರದುರ್ಗವನ್ನು ಅಭಿವೃದ್ಧಿಯತ್ತ ತೆಗದುಕೊಂಡು ಹೋಗುವ ಕಾರ್ಯ ಮಾಡಲಾಗುತ್ತದೆ. ನಿಮ್ಮ ನಿರೀಕ್ಷೆಯ ಮಟ್ಟಕ್ಕೆ ಸೇವೆ ಸಲ್ಲಿಸುತ್ತೇನೆ. ಚಿತ್ರದುರ್ಗ ಅಭಿವೃದ್ಧಿಗೆ ಕೈಜೋಡಿಸುತ್ತೇನೆ. ಶಾಸಕರು ಸಹ ಚಿತ್ರದುರ್ಗದ ಅಭಿವೃದ್ಧಿಗೆ ದೂರದೃಷ್ಟಿ ಹೊಂದಿದ್ದಾರೆ. ಅವರ ಜೊತೆಯಲ್ಲಿ ಕೈಜೋಡಿಸಿ ಚಿತ್ರದುರ್ಗವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು ಎಂದರು.
ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮಾತನಾಡಿ, ‘ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್‌ಪೀರ್ ಅವರು ಪಕ್ಷಕ್ಕೆ ಸಲ್ಲಿಸಿರುವ ಸೇವೆ ಗುರುತಿಸಿ ಪಕ್ಷದ ರಾಜ್ಯ ನಾಯಕರು ಅವರಿಗೆ ಅಧಿಕಾರ ನೀಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಅವರಿಂದ ನಾನು ಸಲಹೆ ಪಡೆಯುತ್ತೇನೆ. ಅವರ ಅನುಭವ ನಿಜಕ್ಕೂ ದೊಡ್ಡದು. ಇವರ ನೇತೃತ್ವ, ಸಹಯೋಗದಲ್ಲಿ ಚಿತ್ರದುರ್ಗವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಬೇಕಿದೆ. ನಮ್ಮ ಸಂಪೂರ್ಣವಾದ ಸಹಕಾರ ಪೂರ್ಣ ಪ್ರಮಾಣದಲ್ಲಿ ಇದೆ. ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: https://chitradurganews.com/bjp-leader-pritam-gowda-warned/
ಪ್ರಾಧಿಕಾರದ ಆಯುಕ್ತ ಸೋಮಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ.ಎಂ.ಹಾಲೇಶ್, ಸಂಪತ್ ಕುಮಾರ್, ಮೈಲಾರಪ್ಪ, ನೇತಾಜಿ, ಸುರೇಶ್ ಬಾಬು, ಖಾಸಿಂ ಆಲಿ, ಎನ್.ಡಿ.ಕುಮಾರ್, ಲಕ್ಷ್ಮೀಕಾಂತ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
