ಮುಖ್ಯ ಸುದ್ದಿ
ರೈತರನ್ನು ಉದ್ಯಮಿಗಳನ್ನಾಗಿ ರೂಪಿಸೋಣ | ಕುದಾಪುರದಲ್ಲಿ ವಿಚಾರ ಸಂಕಿರಣ

CHITRADURGA NEWS | 05 JUNE 2024
ಚಿತ್ರದುರ್ಗ: ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್, ವಿಜ್ಞಾನ ತಂತ್ರಜ್ಞಾನ ಮತ್ತು ನಾವಿನ್ಯತೆ ಕೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 8ರಂದು ಬೆಳಿಗ್ಗೆ 10ಕ್ಕೆ ಚಳ್ಳಕೆರೆ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ‘ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪಾತ್ರ’ ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ಗುರುಮೂರ್ತಿ ಅಧ್ಯಕ್ಷತೆ ವಹಿಸುವರು. ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆಯ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಟ್ಯಾಲೆಂಟ್ ಡೆವಲಪ್ಮೆಂಟ್ ಸೆಂಟರ್ ಸಂಚಾಲಕ ಪ್ರೊ.ಸುಬ್ಬಾರೆಡ್ಡಿ ಉದ್ಘಾಟನೆ ನೆರವೇರಿಸುವರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೆ ಮುಂಗಾರು ಮಳೆ ಸಂಭ್ರಮ | ತುಂಬಿ ಹರಿದ ಹಳ್ಳಕೊಳ್ಳ

ಅತಿಥಿಗಳಾಗಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಭಾರತೀಯ ವಿಜ್ಞಾನ ಸಂಸ್ಥೆಯ ಯೋಜನೆ ಮತ್ತು ಮೂಲಸೌಕರ್ಯಗಳ ಮುಖ್ಯಸ್ಥ ಡಾ.ಎಸ್.ಕೆ.ಸತೀಶ್, ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ಸೀಡ್ ವಿಭಾಗದ ಮುಖ್ಯಸ್ಥ ಡಾ.ಅಮಿತಾವ ಪರ್ಮಾಣಿಕ್ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕ್ರೆಡಿಟ್ ಐ ಸಂಸ್ಥೆ ಮ್ಯಾನೇಜಿಂಗ್ ಟ್ರಸ್ಟಿ ಡಾ.ಎಂ.ಪಿ.ವರ್ಷ, ಬೆಂಗಳೂರಿನ ಕಾಗ್‌ವೀರ್ ಸ್ಟುಡಿಯೋಸ್ ಸಂಸ್ಥಾಪಕ ಕೃಷ್ಣ ಮೋಹನ್ ಭಾಗವಹಿಸಲಿದ್ದಾರೆ.
ಕ್ಲಿಕ್ ಮಾಡಿ ಓದಿ: ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು

ಚಿತ್ರದುರ್ಗ ಜಿಲ್ಲೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಡಿಯಲ್ಲಿ ಬರುವ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಬಹುದಾಗಿದೆ ಎಂದು ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ಕಾರ್ಯಕ್ರಮ ವ್ಯವಸ್ಥಾಪಕ ಪ್ರತಾಪ್ ಮೂರ್ತಿ ತಿಳಿಸಿದ್ದಾರೆ.
