CHITRADURGA NEWS | 01 MAY 2026
ಚಿತ್ರದುರ್ಗ: ಚಿತ್ರದುರ್ಗ ಆಕಾಶವಾಣಿ ಕಾರ್ಯಾರಂಭ ಮಾಡಿ ಮೇ.03 ಭಾನುವಾರಕ್ಕೆ 35 ವರ್ಷ ಪೂರ್ಣವಾಗುತ್ತಿದ್ದು, ಅಂದು ಶ್ರೋತೃಗಳಿಗಾಗಿ ವಿಶೇಷ ಕಾರ್ಯಕ್ರಮಗಳು ಪ್ರಸಾರವಾಗಲಿವೆ.
ಇದನ್ನೂ ಓದಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಿಗ್ಗೆ 8:30ಕ್ಕೆ ಜಿಲ್ಲೆಯ ಕವಯಾತ್ರಿಯರು ಸೃಷ್ಟಿಸಿದ ಆಕಾಶವಾಣಿ ಕಾವ್ಯಧಾರೆ, ಬೆಳಿಗ್ಗೆ 9.05ಕ್ಕೆ ಉದಯೋನ್ಮುಖ ಬರಹಗಾರ್ತಿ ದೀಪಿಕಾ ಮಾರಘಟ್ಟ ಅವರಿಂದ ಆಕಾಶವಾಣಿ ಕುರಿತು ವಿಚಾರ ಲಹರಿ, ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಸಂಗೀತಕ್ಷೇತ್ರದ ಉದಯೋನ್ಮುಖ ಯುವ ಪ್ರತಿಭೆಗಳಾದ ಹಸೀನಾ ಬೇಗಂ ಹಾಗೂ ಸಂಗೀತ. ಎಸ್.ಪ್ರಸ್ತುತ ಪಡಿಸುವ ವೈವಿದ್ಯಮಯ ಸಂಗೀತ ಕಾರ್ಯಕ್ರಮ ಬಿತ್ತರವಾಗಲಿದೆ.
ನಿರಂಜನ ಮೂರ್ತಿ ಆರ್ ಪಂಡರಹಳ್ಳಿ ಕಾರ್ಯಕ್ರಮಗಳನ್ನು ಸಂಕಲಿಸಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿ ನಿಲಯದಲ್ಲಿ ಯುವ ಕಲಾವಿದರಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಬಂಡಿ ಜಾಡುಗಳಿಗೆ 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ | ಭೂಮಿ ಪೂಜೆ ನೆರವೇರಿಸಿದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ
35ನೇ ವರ್ಷಾಚರಣೆ ಸಂಭ್ರಮದಲ್ಲಿ ನಿಲಯದ ಎಲ್ಲಾ ಉದ್ಘೋಷಕರು, ಪ್ರಸಾರ ಸಹಾಯಕರು, ತಾಂತ್ರಿಕ ವಿಭಾಗ ಹಾಗೂ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

