
CHITRADURGA NEWS | 28 February 2026
ಚಿತ್ರದುರ್ಗ: ಕುಡಿಯಲು ತಾಯಿ ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಕೊಂದಿದ್ದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು

ಮೊಳಕಾಲ್ಮೂರು ತಾಲೂಕಿನ ಕೊಪ್ಪ ಗ್ರಾಮದ ಸಿ.ಶಿವಾರೆಡ್ಡಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.
ಕುಡಿಯಲು ಹಣ ಕೊಡುವಂತೆ ಪೀಡಿಸಿ ಆಗಾಗ ಜಗಳವಾಡುತ್ತಿದ್ದ. 2023 ನವೆಂಬರ್ 25 ರಂದು ತಾಯಿ ಅಂಜಿನಮ್ಮ ಭೀಮರೆಡ್ಡಿ ಅವರ ಮನೆ ಬಳಿ ಕುಳಿತಿದ್ದಾಗ ಹಣಕ್ಕೆ ಪೀಡಿಸಿ, ಹಣ ಕೊಡದಿದ್ದಾಗ ಶಿವಾರೆಡ್ಡಿ ತಾಯಿ ಅಂಜಿನಮ್ಮ ಅವರ ಪಕ್ಕೆಗೆ ಚಾಕುವಿನಿಂದ ಚುಚ್ಚಿದ್ದ.
ತೀವ್ರ ರಕ್ತಸ್ರಾವಗೊಂಡಿದ್ದ ಅಂಜಿನಮ್ಮ ಅವರನ್ನು ರಾಂಪುರ ಆಸ್ಪತ್ರೆಗೆ ದಾಖಲಿಸಿದಾಗ ಪರೀಕ್ಷಿಸಿದ್ದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃತ್ತ ನಿರೀಕ್ಷಕರಾದ ಆನಂದ ವಿ ಆಸೋದೆ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: ಮೊಬೈಲ್ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಅವರು, ಫೆ.28 ರಂದು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಂಶೀರ್ ಅಲಿಖಾನ್ ವಾದ ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
