
ಚಿತ್ರದುರ್ಗ ನ್ಯೂಸ್.ಕಾಂ: ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 15 ದಿನಗಳ ಕಾಲ ಫ್ರೂಟ್ಸ್ ನೊಂದಣಿ (ಬೆಳೆ ಸಮೀಕ್ಷೆ) ಅಭಿಯಾನ ಹಮ್ಮಿಕೊಂಡಿದ್ದು ರೈತರು ತಮ್ಮ ಜಮೀನಿನ ಎಲ್ಲ ಪಹಣಿಗಳಿಗೆ ಆಧಾರ್ ಸಂಖ್ಯೆ, ಬ್ಯಾಂಕ್ ವಿವರಗಳನ್ನು ಜೋಡಣೆ ಮಾಡಲು ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ, ತೋಟಗಾರಿಕೆ ಇಲಾಖೆಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಭೀಕರ ಬರ : ಸಂಕಷ್ಟದಲ್ಲಿ ಅನ್ನದಾತ
ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಈಗಾಗಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಿದೆ. ಜಿಲ್ಲೆಯಲ್ಲಿ ಒಟ್ಟು 6,10,353 ಕೃಷಿ ಯೋಗ್ಯ ತಾಕುಗಳಿದ್ದು (ಸರ್ವೆ ನಂಬರ್/ ಪೋಡುಗಳು), ಇವುಗಳಲ್ಲಿ ಈಗಾಗಲೆ 4,04,845 ತಾಕುಗಳನ್ನು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಲಾಗಿದೆ. ಇನ್ನೂ 2,05,508 ತಾಕುಗಳ ಜೋಡಣೆ ಬಾಕಿಯಿದೆ.
ಜಿಲ್ಲೆಯಲ್ಲಿ ಒಟ್ಟು 3,07,160 ರೈತರು 4,04,845 ಸರ್ವೆ ನಂಬರುಗಳನ್ನು ಫ್ರುಟ್ಸ್ ತಂತ್ರಾಂಶದಡಿ ಜೋಡಣೆ ಮಾಡಿಸಿ, ವಿಶಿಷ್ಟ ಗುರುತಿನ ಸಂಖ್ಯೆ (ಎಫ್.ಐ.ಡಿ) ಪಡೆದಿದ್ದಾರೆ. ಉಳಿದಂತೆ 205508 ತಾಕುಗಳನ್ನು (ಸರ್ವೆ ನಂಬರ್/ ಪೋಡುಗಳು) ಜೋಡಣೆ ಮಾಡಿಸಿಕೊಳ್ಳಲು ಬಾಕಿ ಇದ್ದು, ರೈತರು ಶೀಘ್ರ ಜೋಡಣೆ ಮಾಡಿಸಿಕೊಳ್ಳಬೇಕು.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವುದರಿಂದ ಈಗಾಗಲೆ ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ 307160 ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

