CHITRADURGA NEWS | 16 JULY 2024
ಚಿತ್ರದುರ್ಗ: ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್(Aadhaar) ಸಂಖ್ಯೆಯನ್ನು ಜೋಡಣೆ ಮಾಡಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ: Murugh matha; ಕಳ್ಳತನವಾಗಿದ್ದ ಮುರುಘಾ ಶರಣರ ಬೆಳ್ಳಿ ವಿಗ್ರಹ ದಿಢೀರ್ ಪ್ರತ್ಯಕ್ಷ | ಮುರುಘಾ ಮಠಕ್ಕೆ ಶ್ವಾನ ದಳ ದೌಡು
ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್‍ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
