CHITRADURGA NEWS | 31 MAY 2024
ಚಿತ್ರದುರ್ಗ: ಜಿಲ್ಲೆಯಾದ್ಯಂತ ಜೂನ್ 1ರಿಂದ 6 ರವರೆಗೆ ಮದ್ಯ ಮಾರಾಟ ಬಂದ್ ಆಗಲಿದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಲಿದೆ. ಜೂನ್ 1 ಮತ್ತು 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ. ಜೂನ್ 1 ರಂದು ಸಂಜೆ 4 ರೊಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
ಕ್ಲಿಕ್ ಮಾಡಿ ಓದಿ: ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರ ಭೇಟಿ | ಸ್ವಚ್ಛತೆ ಕಾಪಾಡಲು ಸೂಚನೆ
ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟಕ್ಕೆ ನಿಷೇಧ. ವಿಧಾನಪರಿಷತ್ ಚುನಾವಣೆ ಮತ ಎಣಿಕೆ ಕಾರಣಕ್ಕೆ ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಬಂದ್ ಆಗಲಿದೆ.
ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎನ್ನುತ್ತಾರೆ ಚಿತ್ರದುರ್ಗದ ಮದ್ಯ ಮಾರಾಟಗಾರರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
