ಮುಖ್ಯ ಸುದ್ದಿ
ರಾಜ್ಯ ಸರ್ಕಾರದ ಅಬಕಾರಿ ನೀತಿ ವಿರೋಧಿಸಿ ಮದ್ಯ ಮಾರಾಟಗಾರರ ಪ್ರತಿಭಟನೆ

CHITRADURGA NEWS | 04 APRIL 2025
ಚಿತ್ರದುರ್ಗ: ರಾಜ್ಯ ಸರ್ಕಾರದ ಅಬಕಾರಿ ನೀತಿಯನ್ನು ವಿರೋಧಿಸಿ ಶುಕ್ರವಾರ ಜಿಲ್ಲೆಯ ಮದ್ಯ ಮಾರಾಟಗಾರರು ಪ್ರತಿಭಟನೆ ನಡೆಸಿದರು.
Also Read: ಅಧಿಕಾರಿ, ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ
ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ್ದ ಜಿಲ್ಲೆಯ ನೂರಾರು ಮಂದಿ ಮದ್ಯ ಮಾರಾಟಗಾರರು, ರಾಜ್ಯ ಸರ್ಕಾರ ಅನುಸರಿಸುತ್ತಿರುವ ಅಬಕಾರಿ ನೀತಿಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಬಕಾರಿ ಉದ್ಯಮ ನಡೆಸುತ್ತಿರುವವರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕಳೆದ ದಶಕಗಳಿಂದಲೂ ಇದೇ ಪರಿಸ್ಥಿತಿ ಮುಂದುವರೆದಿದ್ದು, ಇವರ ನೋವು ಯಾರಿಗೂ ಕೇಳಿಸುತ್ತಿಲ್ಲ. ಸರ್ಕಾರಗಳು ಈ ವರ್ಗದ ಜನರ ನೋವಿಗೆ ಸ್ಪಂದಿಸುತ್ತಿಲ್ಲವೆಂದು ಕಿಡಿಕಾರಿದರು.
ಒಂದು ರಾಜ್ಯದ ಅಭಿವೃದ್ದಿಯಲ್ಲಿ ಈ ಉದ್ಯಮದ ಪಾಲು ಬಹಳಷ್ಟು ಇದೆ. ಪ್ರತಿವರ್ಷವೂ ಸಾವಿರಾರು ಕೋಟಿ ರೂಪಾಯಿ ಆದಾಯ ಸರ್ಕಾರಕ್ಕೆ ಇದರಿಂದ ಬರುತ್ತಿದೆ. ಹೀಗಿದ್ದರೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರಗಳು ನಿರ್ಲಕ್ಷ ಭಾವ ತೋರುತ್ತಲೇ ಬಂದಿದೆ ಎಂದು ದೂರಿದರು.
Also Read: ಮಳೆ ವಿವರ | ಏ.3 ರಂದು ಸುರಿದ ಮಳೆಯ ಪೂರ್ಣ ವಿವರ
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಜಿ.ಟಿ.ಬಾಬುರೆಡ್ಡಿ, ಕಳೆದ ದಶಕಳಿಂದ ನಮ್ಮ ಯಾವುದೇ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಸರ್ಕಾರ ತಾನೇ ರೂಪಿಸಿರುವ ನಿಯಮಾವಳಿಗಳನ್ನು ಪಾಲನೆ ಮಾಡುತ್ತಿಲ್ಲವೆಂದು ಆರೋಪಿಸಿದರು.
ಕಳೆದ ಹಲವು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ನಮ್ಮ ನೋವು, ಅನಾನುಕೂಲ, ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಸರ್ಕಾರದ ಅಬಕಾರಿ ನೀತಿಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟಿದ್ದೇವೆ. ಜೊತೆಗೆ ಬಜೆಟ್‍ನಲ್ಲಿ ಈ ಉದ್ಮಮಕ್ಕೆ ಪೂರಕವಾಗಿರುವ ಅಂಶಗಳನ್ನಾದರೂ ಸೇರಿಸಿಲ್ಲವೆಂದು ಜಿ.ಟಿ.ಬಾಬುರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು
ಮದ್ಯ ಮಾರಾಟಗಾರರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಸವಾಲುಗಳನ್ನು ಎದುರಿಸಿಯೇ ಉದ್ಯಮವನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ನೋವು, ಸಮಸ್ಯೆಗಳನ್ನು ಹಲವು ಬಾರಿ ಸರ್ಕಾರದ ಮುಖ್ಯಸ್ಥರುನ್ನು ಬೇಟಿ ಮಾಡಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದರು
ಮಧ್ಯ ಮಾರಾಟಗಾರರ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಪ್ರತಿಭಟನೆಯಲ್ಲಿ ಐಶ್ವರ್ಯ ಗ್ರೂಪ್‍ನ ಅರುಣ್‍ಕುಮಾರ್, ಕಿರಣ್‍ಕುಮಾರ್, ದುರ್ಗದ ಸಿರಿಯ ಹನುಮಂತರೆಡ್ಡಿ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಜೀವನ್, ಮದ್ಯ ಮಾರಾಟಗಾರರ ಸಂಘದ ಹಿರಿಯೂರು ತಾಲ್ಲೂಕು ಅಧ್ಯಕ್ಷ ವೆಂಕಟಸ್ವಾಮಿ, ಚಳ್ಳಕೆರೆ ತಾಲ್ಲೂಕು ಸಂಘದ ಅಧ್ಯಕ್ಷ ಪ್ರಕಾಶ್, ಹೊಸದುರ್ಗದ ಮಂಜುನಾಥ್, ಮೊಳಕಾಲ್ಮೂರಿನ ಗುರುಲಿಂಗಪ್ಪ, ಹೊಳಲ್ಕೆರೆಯ ತಿಪ್ಪೇಸ್ವಾಮಿ ಸೇರಿದಂತೆ ಚಿತ್ರದುರ್ಗ ಮತ್ತು ಜಿಲ್ಲೆಯ ವಿವಿಧ ತಾಲೂಕುಗಳಿಂದ ಹಲವಾರು ಮದ್ಯ ಮಾರಾಟಗಾರರು ಪಾಲ್ಗೊಂಡಿದ್ದರು.
