CHITRADURGA NEWS | 06 OCTOBER 2026
ಚಿತ್ರದುರ್ಗ: ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‍ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ‘ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ’ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ವಸತಿ ರಹಿತರಿಗೆ ನಿವೇಶನ, ಮನೆ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ
ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಕೆಲಸಗಾರರಿರುವ ಕೇವಲ 8 ನೋಂದಾಯಿತ ಕೈಗಾರಿಕೆಗಳಿವೆ. ಈ ಪೈಕಿ ಸಕ್ರಿಯವಾಗಿರುವ ಸಂಸ್ಥೆಗಳಲ್ಲಿ ಯುವಕರಿಗೆ ಹೆಚ್ಚಿನ ಅಪ್ರೆಂಟಿಶ್‍ಶಿಪ್ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಹೊಸ ಟ್ರೇಡ್‍ಗಳನ್ನು (ತರಬೇತಿ ವಿಭಾಗಗಳು) ಪರಿಚಯಿಸಿ ಕೈಗಾರಿಕೆಗಳೊಂದಿಗೆ ಸಮನ್ವಯ ಸಾಧಿಸಬೇಕು.
ಸ್ಥಳೀಯವಾಗಿ ಕೈಗಾರಿಕೆಗಳು ಕಡಿಮೆಯಿರುವುದರಿಂದ, ಬೆಂಗಳೂರು ಹಾಗೂ ತುಮಕೂರು ಭಾಗದ ಪ್ರಮುಖ ಕೈಗಾರಿಕೆಗಳನ್ನು ಸಂಪರ್ಕಿಸಿ ಅಪ್ರೆಂಟಿಸ್ ಡ್ರೈವ್ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಯಂ ಉದ್ಯೋಗ ಹಾಗೂ ಸಾಲ ಸೌಲಭ್ಯ:
ಪಿಎಂಇಜಿಪಿ ಸೇರಿದಂತೆ ವಿವಿಧ ಯೋಜನೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಯುವಕ-ಯುವತಿಯರಿಗೆ ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ದೊರೆಯುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಬ್ಯಾಂಕ್ ಶಾಖೆಗಳ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ಸಾಲ ಮಂಜೂರು ಮಾಡಿ ವಿತರಿಸುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಇದನ್ನೂ ಓದಿ: ಕಳಪೆ ಹಂಪ್ಸ್ ತೆರವುಗೊಳಿಸಿ ಗುಣಮಟ್ಟದ ಹಂಪ್ಸ್ ಅಳವಡಿಸಿ | ಕರುನಾಡ ವಿಜಯಸೇನೆ
ಉಪಸಮಿತಿ ಮತ್ತು ತಾಲೂಕು ಸಮಿತಿಗಳ ಪುನಾರಚನೆ:
ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತಾಲೂಕು ಮಟ್ಟದ ಕೌಶಲ್ಯ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಉಪಸಮಿತಿಗಳನ್ನು ಹಾಗೂ ತಾಲೂಕು ಮಟ್ಟದ ಸಮಿತಿಗಳನ್ನು ಪುನಾರಚಿಸಿಬೇಕು. ಯುವಜನರಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಹಾಗೂ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಇದೇ ವೇಳೆ ಜಪಾನ್‍ನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಗೆ ಜಿಲ್ಲೆಯಿಂದ 135 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಅಭ್ಯರ್ಥಿಗಳಿಗೆ ಸೂಕ್ತ ಸ್ಕ್ರೀನಿಂಗ್ ಮತ್ತು ತರಬೇತಿ ನೀಡಿ, ಮುಂದಿನ ಹಂತಗಳಿಗೆ ಸಜ್ಜುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಸಾಣೇಹಳ್ಳಿ ಶ್ರೀಗಳ ಅಮೃತ ಮಹೋತ್ಸವ | ಪುಸ್ತಕ ಬಿಡುಗಡೆ
ಸಭೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ, ಜಿ.ಪಂ.ಯೋಜನಾ ನಿರ್ದೇಶಕಿ ಜಯಲಕ್ಷಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್,ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಲೀಡ್ ಬ್ಯಾಂಕ್ ಜಿಲ್ಲಾ ವ್ಯಸ್ಥಾಪಕ ಎಂ.ಪಿ.ಪ್ರವೀಣ್, ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಪುಷ್ಪಲತಾ ಭಾವಿಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

