
CHITRADURGA NEWS | 13 MARCH 2026
ಚಿತ್ರದುರ್ಗ: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2026-27ನೇ ಸಾಲಿನ ಎಂ.ಬಿ.ಬಿ.ಎಸ್ ಕೋರ್ಸ್ ಹಾಗೂ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಎಂ.ಡಿ. ಪದವಿಗಳ ಕೋರ್ಸ್ಗಳನ್ನು ಆರಂಭಿಸಲು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನಾ ಸಮಿತಿ (ಎಲ್.ಐ.ಸಿ) ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
ಬೆಂಗಳೂರು ಎಂವಿಎಂ ಪ್ರಕೃತಿ ಚಿಕಿತ್ಸೆ ಮತ್ತು ವೇದ ವಿಜ್ಞಾನ ಕಾಲೇಜು ಪ್ರಾಂಶುಪಾಲರು ಸಮಿತಿಯ ಅಧ್ಯಕ್ಷೆ ಡಾ. ವಿನುತಾ ರಾವ್ ಸದಸ್ಯರಾದ ಪದ್ಮಶ್ರೀ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಡಾ.ಶ್ರುತಿ ಎಚ್.ಪಿ ಹಾಗೂ ಚಿತ್ರದುರ್ಗ ಬಸವೇಶ್ವರ ವೈದ್ಯಕೀಯ ಕಾಲೇಜಿನ ಡಾ.ನಾರಾಯಣ ಮೂರ್ತಿ ಬೆಳಿಗ್ಗೆ 9:30ಕ್ಕೆ ಆಗಮಿಸಿ, ಬೆಳಿಗ್ಗೆ 9:40ಕ್ಕೆ ಹಾಜರಾತಿ ಪರಿಶೀಲನೆ ನಡೆಸಿತು.
ಸಂಸ್ಥೆಯ ಎಲ್ಲಾ ಬೋಧಕ ಸಿಬ್ಬಂದಿಗಳ ಘೋಷಣೆ ನಮೂನೆಗಳು ಮತ್ತು ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾಲೇಜು ಹಾಗೂ ಬೋಧಕ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿದರು.
ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಮುರುಘಾಮಠದಲ್ಲಿ ವಿಶೇಷ ಕಾರ್ಯಕ್ರಮ
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಯುವರಾಜ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

