ಲೋಕಸಮರ 2024
ಲೋಕಸಭಾ ಚುನಾವಣೆ | ಏ.4ರ ವರೆಗೆ ನಾಮಪತ್ರ ಸ್ವೀಕಾರ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
CHITRADURGA NEWS | 29 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ
ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ಪರಿಶಿಷ್ಟ ಜಾತಿ ಮೀಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ.
ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಬಹುದು.
ಇದನ್ನೂ ಓದಿ: ದನ, ಎಮ್ಮೆಗಳಿಗೆ ಉಚಿತ ಲಸಿಕೆ
ಸಾರ್ವತ್ರಿಕ ರಜಾದಿನ ಹೊರತು ಪಡಿಸಿ ಏಪ್ರಿಲ್ 4 ವರೆಗೆ ಪ್ರತಿದಿನ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಕೈ ಚೀಲದಲ್ಲಿ ರೂ.3.55 ಕೋಟಿ ಮೌಲ್ಯದ ಚಿನ್ನ ಪತ್ತೆ
ಏಪ್ರಿಲ್ 5 ರಂದು ಬೆಳಿಗ್ಗೆ 11.00ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯುಲು ಇಚ್ಛಿಸಿದ್ದಲ್ಲಿ, ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಸೂಚಕ ಅಥವಾ ಉಮೇದುವಾರ ನೇಮಿಸಿದ ಏಜೆಂಟ್ ಏಪ್ರಿಲ್ 8 ರಂದು ಮಧ್ಯಾಹ್ನ 3.00 ಗಂಟೆಗೆ ಮುಂಚೆ ಚುನಾವಣಾಧಿಕಾರಿಗೆ ಸಲ್ಲಿಸಬೇಕು. ಏಪ್ರಿಲ್ 26 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 6.00 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.