CHITRADURGA NEWS | 21 MARCH 2024
ಚಿತ್ರದುರ್ಗ: ಲೋಕಸಭಾ ಚುನಾವಣೆ ನೀತೆ ಸಂಹಿತೆ ಹಿನ್ನಲೆಯಲ್ಲಿ ಜಿಲ್ಲೆಯ ಪೆಟ್ರೋಲ್ ಬಂಕ್, ಲಾಡ್ಜ್, ಪ್ರಿಂಟಿಂಗ್ ಪ್ರೆಸ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ | ವಿಧಾನಸಭಾ ಕ್ಷೇತ್ರವಾರು ವಿದ್ಯುನ್ಮಾನ ಮತ ಯಂತ್ರ ಹಂಚಿಕೆ

ಕರಪತ್ರ, ಭಿತ್ತಿಪತ್ರ, ಬ್ಯಾನರ್ ಸೇರಿದಂತೆ ಇತರೆ ಚುನಾವಣೆ ಪ್ರಚಾರ ಸಾಮಾಗ್ರಿಗಳ ಮುದ್ರಣ ಸಂಬಂಧಿಸಿದಂತೆ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಸರಿಯಾದ ಲೆಕ್ಕ ಇಡಬೇಕು. ನಿಗದಿತ ನಮೂನೆಯೊಳಗೆ ವಿವರಗಳನ್ನು ಭರ್ತಿ ಮಾಡಿ ಚುನಾವಣೆ ಶಾಖೆ ನೀಡಬೇಕು. ಪ್ರತಿ ಕರಪತ್ರ ಹಾಗೂ ಭಿತ್ತಿಪತ್ರಗಳ ಮೇಲೆ ಮುದ್ರಿಸಿದ ಪ್ರತಿಗಳ ಸಂಖ್ಯೆ ಹಾಗೂ ಮುದ್ರಣಕಾರರ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಬೇಕು. ಪೇಪರ್, ಇಂಕ್ ಹಾಗೂ ಇತರೆ ಸಾಮಗ್ರಿಗಳ ಖರೀದಿ ರಿಜಿಸ್ಟರ್‍ಗಳನ್ನು ಚುನಾವಣೆ ಶಾಖೆಯಿಂದ ಆಡಿಟ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಸಾಲಗಾರರ ಕಾಟಕ್ಕೆ ಗೃಹಿಣಿ ಆತ್ಮಹತ್ಯೆ
ಇದೇ ವೇಳೆ ಪೆಟ್ರೋಲ್ ಬಂಕ್ ಮಾಲೀಕರಿಗೆ ಮತದಾನದ ಆಮಿಷವಾಗಿ ಪೆಟ್ರೋಲ್ ಹಂಚುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಇದೇ ವೇಳೆ ಲಾಡ್ಜ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು.
ಇದನ್ನೂ ಓದಿ: ಮತದಾನ ಪ್ರಮಾಣ ಶೇ.5 ರಷ್ಟು ಹೆಚ್ಚಿಸಲು ಪಣ | ಸಿಇಓ ಎಸ್.ಜೆ.ಸೋಮಶೇಖರ್
ಈ ಸಂದರ್ಭದಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿ.ಪಂ.ಮುಖ್ಯಲೆಕ್ಕಾಧಿಕಾರಿ ಡಿ.ಆರ್.ಮಧು ಉಪಸ್ಥಿರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
