ಲೋಕಸಮರ 2024
ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?

CHITRADURGA NEWS | 24 MAY 2024
ಚಿತ್ರದುರ್ಗ: ಇನ್ನೂ ಹತ್ತು ದಿನ ಕಳೆದರೆ ಲೋಕಸಭೆ ಚುಣಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಿ, ದೇಶದ ಭವಿಷ್ಯ ನಿರ್ಧಾರವಾಗಲಿದೆ.
ವಿಶೇಷವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ಒಡ್ಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವುದು ಗೊತ್ತಾಗಲು ಹತ್ತು ದಿನ ಮಾತ್ರ ಬಾಕಿ ಇವೆ.

ಇದನ್ನೂ ಓದಿ: ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಭರದ ತಯಾರಿ ಮಾಡಿಕೊಳ್ಳುತ್ತಿದ್ದು, ತ್ವರಿತವಾಗಿ ಚುನಾವಣಾ ಫಲಿತಾಂಶ ನೀಡಲು ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ತರಬೇತಿ ನೀಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾವಗಡ, ಶಿರಾ, ಹಿರಿಯೂರು, ಮೊಳಕಾಲ್ಮೂರು, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ ಹಾಗೂ ಹೊಸದುರ್ಗ ಹೀಗೆ 8 ವಿಧಾನಸಭಾ ಕ್ಷೇತ್ರಗಳಿವೆ.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್ ತಾಳಿಕಟ್ಟೆ ಉಚ್ಚಾಟನೆ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‍ಗಳನ್ನು ನಿಗಧಿಪಡಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಏಕಕಾಲಕ್ಕೆ ತೆರೆಯಲಾಗುವುದು. ಬೆಳಿಗ್ಗೆ 8ರಿಂದ ಅಂಚೆ ಮತ ಎಣಿಕೆ ಮತ್ತು ವಿದ್ಯುನ್ಮಾನ ಮತಯಂತ್ರಗಳ ಎಣಿಕೆಯನ್ನು ಆರಂಭಿಸಲಾಗುವುದು.
ನೆಲಮಹಡಿಯಲ್ಲಿ ಚಳ್ಳಕೆರೆ, ಹೊಸದುರ್ಗ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳ ಎಣಿಕೆ, ಮೊದಲ ಮಹಡಿಯಲ್ಲಿ ಮೊಳಕಾಲ್ಮೂರು, ಹಿರಿಯೂರು ಮತ್ತು ಶಿರಾ ತಾಲೂಕುಗಳ ಮತಎಣಿಕೆ ಹಾಗೂ ಎರಡನೇ ಮಹಡಿಯಲ್ಲಿ ಚಿತ್ರದುರ್ಗ ಮತ್ತು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯ ನಡೆಯಲಿದೆ ಎಂದರು.
ಇದನ್ನೂ ಓದಿ: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ,
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತರಬೇತುದಾರ ನಾಗಭೂಷಣ, ಜಿಲ್ಲಾ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್ ಮತ್ತಿತರರಿದ್ದರು.
ಯಾವ ಕ್ಷೇತ್ರಕ್ಕೆ ಎಷ್ಟು ಸುತ್ತಿನ ಮತ ಎಣಿಕೆ:
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 260 ಮತಗಟ್ಟೆಗಳ ಎಣಿಕೆಯು 19 ಸುತ್ತುಗಳಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 288 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹಿರಿಯೂರು ವಿಧಾನಸಭಾ ಕ್ಷೇತ್ರದ 287 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 299 ಮತಗಟ್ಟೆಗಳ ಎಣಿಕೆಯು 22 ಸುತ್ತುಗಳಲ್ಲಿ, ಶಿರಾ ವಿಧಾನಸಭಾ ಕ್ಷೇತ್ರದ 267 ಮತಗಟ್ಟೆಗಳ ಎಣಿಕೆಯು 20 ಸುತ್ತುಗಳಲ್ಲಿ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ ನಡೆಯಲಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್
