Connect with us

    ಲೋಕಸಭೆ ಚುನಾವಣೆ | ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲ್ಲಿಸೋಣ | ಎಂ.ಜಯ್ಯಣ್ಣ

    ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ

    ಮೊಳಕಾಳ್ಮೂರು

    ಲೋಕಸಭೆ ಚುನಾವಣೆ | ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲ್ಲಿಸೋಣ | ಎಂ.ಜಯ್ಯಣ್ಣ

    CHITRADURGA NEWS | 25 FEBRUARY 2024

    ಮೊಳಕಾಲ್ಮೂರು: 2024ರ ಲೋಕಸಭಾ ಚುನಾವಣೆಗೆ
    ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರೇ ಅಭ್ಯರ್ಥಿಯಾಗಿ ಬಂದರೂ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಾಗಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎಂ.ಜಯ್ಯಣ್ಣ ಹೇಳಿದರು.

    ಮೊಳಕಾಲ್ಮೂರು ತಾಲ್ಲೂಕಿನ ಬಿ.ಜಿ.ಕೆರೆಯ ಜಗಜೀವನ್ ರಾಮ್ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಯ್ಯಣ್ಣ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

    ಇದನ್ನೂ ಓದಿ: 16 ಹೊಸ ಮಳಿಗೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಎಂ. ಚಂದ್ರಪ್ಪ

    ರಾಜ್ಯದ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದು ನಮ್ಮ ಎಚ್.ಡಿ.ಕುಮಾರಸ್ವಾಮಿ ಎಂದರು.

    ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅನೇಕ ಜನಪರ ರೈತರ ಕ್ರಾಂತಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ, ರೈತರ ಸಾಲ ಮನ್ನಾ ಮಾಡಿ, ಬಡವರಿಗೆ, ದೀನದಲಿತರಿಗೆ ಹಾಗೂ ರಾಜ್ಯದ ಎಲ್ಲಾ ಸಮುದಾಯಗಳಿಗೆ ಅನುಕೂಲ ಮಾಡಿದ್ದಾರೆ ಎಂದು ತಿಳಿಸಿದರು.

    ಈ ಬಾರಿ ಕಾಂಗ್ರೆಸ್‍ನ್ನು ಸೋಲಿಸಬೇಕು 28ಕ್ಕೆ 28 ಅಭ್ಯರ್ಥಿಗಳು ಗೆಲ್ಲಬೇಕೆಂಬ ದೃಷ್ಟಿಯಿಂದ ಮೈತ್ರಿ ಮಾಡಿಕೊಂಡಿದ್ದೇವೆ. ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಗೆಲುವು ಸಾಧಿಸಿದೆ ಜೆಡಿಎಸ್ ಮತ್ತು ಬಿಜೆಪಿ ಎರಡು ಬಾರಿ ಗೆದ್ದಿದೆ ಎಂದರು.

    ಇದನ್ನೂ ಓದಿ: ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ

    ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ.ವೀರಭದ್ರಪ್ಪ ಮಾತನಾಡಿ, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು, ಹಗಲು ರಾತ್ರಿ ಅನ್ನದೆ ನಮ್ಮ ದೇಶಕ್ಕಾಗಿ ದುಡಿಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ನಮ್ಮ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

    ಸಭೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಇದನ್ನೂ ಓದಿ: ಅಡಿಕೆ ಧಾರಣೆ | 24 ಫೆಬ್ರವರಿ | ಶನಿವಾರದ ಅಡಿಕೆ ಮಾರುಕಟ್ಟೆ ರೇಟ್

    ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ರವೀಂದ್ರಪ್ಪ, ತಿಮ್ಮರಾಯಪ್ಪ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಕರಿಬಸಪ್ಪ, ಪಾವಗಡ ತಾಲ್ಲೂಕು ಅಧ್ಯಕ್ಷ ಈರಣ್ಣ, ಜೆಡಿಎಸ್ ಪಕ್ಷದ ಅಬ್ಬೆನಹಳ್ಳಿ ಚನ್ನಬಸಪ್ಪ, ಧನಂಜಯ, ಬಿಜಿಕೆರೆ ತಿಪ್ಪೇಸ್ವಾಮಿ, ಕುಮಾರ ಮಲ್ಲೂರಹಳ್ಳಿ, ತಿಪ್ಪೇಸ್ವಾಮಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮೊಳಕಾಳ್ಮೂರು

    To Top