ಮುಖ್ಯ ಸುದ್ದಿ
ಲೋಕಾಯುಕ್ತರು ಬರುತ್ತಿದ್ದಾರೆ | ಅಹವಾಲುಗಳಿದ್ದರೆ ಸಲ್ಲಿಸಿ
CHITRADURGA NEWS | 24 JUNE 2024
ಚಿತ್ರದುರ್ಗ: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಬಿಜೆಪಿ ಕಾರ್ಯಕರ್ತರ ಬಂಧನ | ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ವೇಳೆ ಘಟನೆ
ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಜೂ. 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ, ಮೊಳಕಾಲ್ಮೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 05.30 ರವರೆಗೆ ಚಳ್ಳಕೆರೆ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
ಜೂ.28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾ.ಪಂ., ಮಧ್ಯಾಹ್ನ 2.30 ರಿಂದ ಸಂಜೆ 05.30 ರವರೆಗೆ ಚಿತ್ರದುರ್ಗ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು. ಅದೇ ದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸುವರು.
ಇದನ್ನೂ ಓದಿ: ಪ್ರತಿಷ್ಠಿತ ಪತಂಜಲಿ ಸ್ಕೂಲ್ ಆಫ್ ನರ್ಸಿಂಗ್ | ಜಿಎನ್‍ಎಂ ನರ್ಸಿಂಗ್ ಪ್ರವೇಶ ಆರಂಭ
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.