CHITRADURGA NEWS | 18 NOVEMBER 2026
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಹಾಗೂ ಅಳತೆ ಮತ್ತು ತೂಕ ಇಲಾಖೆಯ ನಿರೀಕ್ಷಕ ವೆಂಕಟೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ತಪಾಸಣೆ ಕೈಗಿೊಂಡಿದ್ದಾರೆ.
ಇದನ್ನೂ ಓದಿ:ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
ಡಾ.ರವೀಂದ್ರ ಅವರಿಗೆ ಸೇರಿದ ಚಳ್ಳಕೆರೆ ರಸ್ತೆಯಲ್ಲಿರುವ ಮನೆ, ಖಾಸಗಿ ಕ್ಲಿನಿಕ್ ಅಕ್ಷಯ ಗ್ಲೋಬಲ್ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆದಿದೆ.
ಇನ್ನೂ ಅಧಿಕಾರಿ ವೆಂಕಟೇಶ್ ಅವರಿಗೆ ಸೇರಿದ ವಿದ್ಯಾ ನಗರದ ಮನೆ, ಎಪಿಎಂಸಿ ಕಚೇರಿಗಳಲ್ಲಿ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ನಾರ್ಮಲ್ ಡಿಲೆವರಿಗೆ ಹೆಚ್ಚು ಆದ್ಯತೆ ನೀಡಿ | ಡಾ.ಅಭಿನವ್
ಲೋಕಾಯುಕ್ತ ಎಸ್ಪಿ ಕೌಲಾಪುರೆ, ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಬಸವರಾಜ ಲಮಾಣಿ, ಬಸವರಾಜ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ಕೈಗೊಳ್ಳಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

