
CHITRADURGA NEWS | 29 July 2025
ಹಿರಿಯೂರು: ಬೆಳ್ಳಂ ಬೆಳಗ್ಗೆ ಕಾರ್ಯಾಚರಣೆಗಿಳಿದ ಲೋಕಾಯುಕ್ತರು, ಆದಾಯ ಮೀರಿ ಆಸ್ತಿ ಮಾಡಿರುವ ಆರೋಪ ಇರುವ ಅಧಿಕಾರಿಗಳ ಚಳಿ ಬಿಡಿಸುತ್ತಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಸಮುದಾಯ ಭವನ ಲೋಕಾರ್ಪಣೆಗೆ ಜಿಲ್ಲಾ ನಿವೃತ್ತ ನಾಯಕ ನೌಕರರ ಸಂಘ ಮನವಿ
ಆರೋಗ್ಯ ಇಲಾಖೆ ಅಧಿಕಾರಿ, ಹಿರಿಯೂರು ಟಿಎಚ್ಓ (ತಾಲೂಕು ಆರೋಗ್ಯಾಧಿಕಾರಿ) ಡಾ.ಟಿ.ವೆಂಕಟೇಶ್ ಅವರ ಮನೆ, ಕ್ಲಿನಿಕ್ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.
ಹಿರಿಯೂರು ನಗರದ ಯರಗುಂಟೇಶ್ವರ ಬಡಾವಣೆಯಲ್ಲಿರುವ ಮನೆ ಹಾಗೂ ಆದಿವಾಲ ಗ್ರಾಮದ ಕ್ಲಿನಿಕ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ದಾಖಲೆ ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸೆ.16 ರಂದು ಬಸವ ಸಂಸ್ಕ್ರತಿ ಅಭಿಯಾನ | ಸಾಣೇಹಳ್ಳಿ ಶ್ರೀ, ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಭೆ
ಲೋಕಾಯುಕ್ತ ಪೊಲೀಸ್ ವರಿಷ್ಠಧಿಕಾರಿ ವಾಸುದೇವ ರಾಂ, ಡಿವೈಎಸ್ಪಿ ಮೃತ್ಯಂಜಯ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
