
CHITRADURGA NEWS | 14 October 2025
ಚಿತ್ರದುರ್ಗ: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದು, ಕೃಷಿ ಇಲಾಖೆ ಅಧಿಕಾರಿ ಮನೆ, ಕಚೇರಿ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ | 14 ಅಕ್ಟೋಬರ್ | ಉದ್ಯೋಗದಲ್ಲಿ ಬಡ್ತಿ, ಸಾಲದ ಒತ್ತಡದಿಂದ ಮುಕ್ತಿ, ಹೊಸ ವ್ಯವಹಾರಗಳಲ್ಲಿ ಹೂಡಿಕೆ

ಬೆಳಗ್ಗೆ 6.30ರ ವೇಳೆಗೆ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು.
ಹೊಳಲ್ಕೆರೆ ಕೃಷಿ ಇಲಾಖೆ ಎಡಿ ಚಂದ್ರಕುಮಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.
ಚಿತ್ರದುರ್ಗ ನಗರದ ಮನೆ, ಹೊಳಲ್ಕೆರೆಯ ಕಚೇರಿ ಹಾಗೂ ಟಿ.ನುಲೇನೂರು ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತರು, ದಾಖಲೆ ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ: ಕಾರ್ಯನಿರತ ಪತ್ರಕರ್ತರ ಸಂಘ | ಮತದಾರರ ಕರಡು ಪಟ್ಟಿ ಪ್ರಕಟಣೆ | ನವೆಂಬರ್ 09 ಮತದಾನ
ಲೋಕಾಯುಕ್ತ ಎಸ್ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
