CHITRADURGA NEWS | 19 JULY 2025
ಚಿತ್ರದುರ್ಗ: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಇಂದಿನ ಅಡಿಕೆ ಮಾರುಕಟ್ಟೆ | ಜುಲೈ 18 |ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಲೋಕಾಯುಕ್ತ ಪೊಲೀಸ್ ನಿರೀಕ್ಷಕರು-01 ಅವರು ಜು. 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.
ಪೊಲೀಸ್ ನಿರೀಕ್ಷಕರು-02 ಅವರು ಇದೇ ದಿನದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅಹವಾಲು ಸ್ವೀಕರಿಸುವರು.
ಜು. 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. ಇದೇ ದಿನದಂದು ಪೊಲೀಸ್ ಉಪಾಧೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ, ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಅಹವಾಲು ಅರ್ಜಿ ಸ್ವೀಕರಿಸುವರು.
ಇದನ್ನೂ ಓದಿ: ಜು.22ರಂದು ಬೃಹತ್ ಉಚಿತ ಕಣ್ಣಿನ ತಪಾಸಣೆ
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎನ್. ವಾಸುದೇವರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
